














ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 2024-25 ನೇ ಸಾಲಿನ 10ನೇ ತರಗತಿಯ ಪಬ್ಲಿಕ್ ಪರೀಕ್ಷೆಯ ಕನ್ನಡ ವಿಷಯದಲ್ಲಿ ಶೇಖಡ100 ಅಂಕ ಗಳಿಸಿದ ಸುಳ್ಯ ತಾಲೂಕಿನ ಪ್ರೌಢ ಶಾಲೆಗಳ ವಿದ್ಯಾರ್ಥಿಗಳಿಗೆ ಗೌರವ ಸಮರ್ಪಣಾ ಕಾರ್ಯಕ್ರಮವು ಜೂ.21ರಂದು ಕನ್ನಡ ಭವನ ಅಂಬಟೆಡ್ಕ ಸುಳ್ಯ ಇಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ ಕೆ ಇವರು ಉದ್ಘಾಟಿಸಲಿದ್ದಾರೆ. ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ರಿ ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಇವರು ವಿದ್ಯಾರ್ಥಿಗಳನ್ನು ಸನ್ಮಾನಿಸಲಿದ್ದಾರೆ. ನೆಹರು ಮೆಮೋರಿಯಲ್ ಪ ಪೂ ಕಾಲೇಜಿನ ಪ್ರಾಂಶುಪಾಲರಾದ ಮಿಥಾಲಿ ಪಿ ರೈ ಇವರು ಶುಭಾಶಂಸನೆ ಗೈಯಲಿದ್ದಾರೆ. ಮುಖ್ಯ ಅಥಿತಿಗಳಾಗಿ ಸುಳ್ಯ ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮುಸ್ತಾಫ ಕೆ ಎಂ ಇವರು ಭಾಗವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಚಂದ್ರಶೇಖರ್ ಪೆರಾಲ್ ಇವರು ವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಂಬಂದ ಪಟ್ಟ ಶಾಲೆಯ ಕನ್ನಡ ಶಿಕ್ಷಕರನ್ನು ಗೌರವಿಸಲಾಗುವುದು. ಅರ್ಹ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಹಾಗೂ ಕನ್ನಡಾಭಿಮಾನಿಗಳು ಭಾಗವಹಿಸಬೇಕೆಂದು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಚಂದ್ರಶೇಖರ್ ಪೆರಾಲ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.










