ಶ್ರೀಮತಿ ಜಯಲಕ್ಷ್ಮಿ ನೀಲಕಂಠ ಭಟ್‌ರವರ ಶ್ರದ್ದಾಂಜಲಿ ಸಭೆ

0


ಇತ್ತೀಚೆಗೆ ನಿಧನರಾದ ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಾಲಯದ ಅರ್ಚಕ ನೀಲಕಂಠ ಭಟ್‌ರವರ ಪತ್ನಿ ಶ್ರೀಮತಿ ಜಯಲಕ್ಷ್ಮಿಯವರ ಶ್ರದ್ದಾಂಜಲಿ ಸಭೆಯು ಜೂ. ೧೫ರಂದು ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಾಲಯದ ಸಭಾಭವನದಲ್ಲಿ ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಂ. ವೆಂಕಪ್ಪ ಗೌಡರು ವಹಿಸಿದ್ದು, ಪ್ರಾಸ್ತಾವಿಕವಾಗಿ ಮಾತನಾಡಿದರು. ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರಾದ ಕುಸುಮಾಧರ ಎ.ಟಿ.ಯವರು ನುಡಿನಮನಗೈದರು. ಸಭೆಯಲ್ಲಿ ದೇವಾಲಯದ ಜೀರ್ಣೋದ್ಧಾರ ಸಮಿತಿಯ ಮಾಜಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಬ್ರಹ್ಮಕಲಶ ಸಮಿತಿಯ ಪದಾಧಿಕಾರಿಗಳು, ಸೇವಾ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಮತ್ತು ಊರವರು ಇದ್ದರು.


ಒಂದು ನಿಮಿಷದ ಮೌನ ಪ್ರಾರ್ಥನೆ ಮಾಡಲಾಯಿತು. ವ್ಯವಸ್ಥಾಪನಾ ಸಮಿತಿ ಸದಸ್ಯ ಜತ್ತಪ್ಪ ರೈ ವಂದಿಸಿದರು.