ಪೆರಾಜೆ ಜ್ಯೋತಿ ಪ್ರೌಢಶಾಲೆಯಲ್ಲಿ ವಿಶ್ವ ಅಪ್ಪಂದಿರ ದಿನಾಚರಣೆ

0


ಪೆರಾಜೆ ಜ್ಯೋತಿ ಪ್ರೌಢಶಾಲೆಯಲ್ಲಿ ಜೂ. 14 ರಂದು ವಿಶ್ವ ಅಪ್ಪಂದಿರ ದಿನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ಮುಖ್ಯೋಪಾಧ್ಯಾಯರಾದ ವೇಣುಗೋಪಾಲ್‌ರವರು ಕುಟುಂಬದಲ್ಲಿ ಅಪ್ಪನ ಮಹತ್ವ ಕುರಿತು ವಿವರವಾಗಿ ವಿವರಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ಮಹೇಶ್ ಕುಮಾರ್ ಮೇನಾಲ ವಹಿಸಿದ್ದರು. ಅತಿಥಿಗಳಾಗಿ ಶಾಲಾ ಮುಖ್ಯ ಶಿಕ್ಷಕರಾದ ಜಿ.ಆರ್. ನಾಗರಾಜ್, ಡಿ.ಪಿ. ಪೂವಪ್ಪ ಉಪಸ್ಥಿತರಿದ್ದರು.


ಶಾಲಾ ವಿದ್ಯಾರ್ಥಿಗಳು ತಮ್ಮ ಅಪ್ಪನ ಕುರಿತು ಅನುಭವ ಹಂಚಿಕೊಂಡರು. ಕಛೇರಿ ಅಧೀಕ್ಷಕಿ ಶ್ರೀಮತಿ ಚಂದ್ರಮತಿ ಸ್ವಾಗತಿಸಿದರು. ಶ್ರೀಮತಿ ಅರ್ಚನಾ ಕೆ.ವಿ. ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಶೃತಿ ವಂದಿಸಿದರು.