ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಕಾಚುಕುಜುಂಬ ದೈವಸ್ಥಾನಕ್ಕೆ ಹೋಗುವ ಕಾಂಕ್ರೀಟ್ ರಸ್ತೆ ಉದ್ಘಾಟನೆ

0

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಕಾಚುಕುಜುಂಬ ದೈವದ ಮೂಲಸ್ಥಾನಕ್ಕೆ ಹೋಗುವ ಕಾಂಕ್ರೀಟ್ ರಸ್ತೆ ಜೂ. 15ರಂದು ಉದ್ಘಾಟನೆಗೊಂಡಿತು.
ಕಲ್ಮಡ್ಕ ಗ್ರಾ.ಪಂ.ನ ಅನುದಾನದ ಮೂಲಕ ಅಭಿವೃದ್ಧಿಗೊಂಡಿದ್ದ ರಸ್ತೆಯನ್ನು ಕಲ್ಮಡ್ಕ ಗ್ರಾ.ಪಂ. ಅಧ್ಯಕ್ಷ ಮಹೇಶ್ ಕುಮಾರ್ ಕರಿಕ್ಕಳ ಉದ್ಘಾಟಿಸಿ ಶುಭ ಹಾರೈಸಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿ, ವಂದಿಸಿದರು.


ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಧರ್ಮಣ್ಣ ನಾಯ್ಕ ಗರಡಿ, ಶ್ರೀಮತಿ ಪವಿತ್ರ ಕುದ್ವ, ಕಲ್ಮಡ್ಕ ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ಮೋಹಿನಿ ಮಾಳಪ್ಪಮಕ್ಕಿ, ಸದಸ್ಯರಾದ ಶ್ರೀಮತಿ ಮೀನಾಕ್ಷಿ ಬೊಮ್ಮೆಟ್ಟಿ, ಲೋಕಯ್ಯ ನಾಯ್ಕ ಬೊಳಿಯೂರು, ಶ್ರೀಮತಿ ಪವಿತ್ರ ಮಲ್ಲೆಟ್ಟಿ, ಮಾಜಿ ತಾ.ಪಂ. ಸದಸ್ಯ ಗಫೂರ್ ಎಣ್ಮೂರು, ಪಂಬೆತ್ತಾಡಿ ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷ ಗಣೇಶ್ ಭೀಮಗುಳಿ, ನಿರ್ದೇಶಕರಾದ ವೆಂಕಪ್ಪ ಬೆಳಗಜೆ, ಶ್ರೀಮತಿ ರಂಜಿನಿ ರಜಿತ್ ಭಟ್ ಪಂಜಬೀಡು, ಪೈಂದೋಡಿ ಶ್ರೀ ಸುಬ್ರಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಗೌಡ ಕುದ್ವ, ಸದಸ್ಯ ಕಿಶೋರ್ ನೆಕ್ಕಿಲ, ಸ್ಥಳೀಯರಾದ ರಜಿತ್ ಭಟ್ ಪಂಜಬೀಡು, ರಘು ಭಟ್ ಪಂಜಬೀಡು ಸೇರಿದಂತೆ ಊರ ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.