ಹಳೆಗೇಟು: ಮಹಿಳೆಯೊಂದಿಗೆ ಅನುಚಿತ ವರ್ತನೆ, ಆರೋಪಿಗೆ ನ್ಯಾಯಾಂಗ ಬಂಧನ

0

ಹಳೆಗೇಟಿನ ಬಾಟಾ ಶೋರೂಂ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಂದಿಗೆ ಅನುಚಿತ ವರ್ತನೆ ಮಾಡಿ ಆಕೆಯ ಪತಿಯಿಂದ ಪೆಟ್ಟು ತಿಂದ ಅಂಗಡಿ ಮಾಲಕ ಅಶ್ಫಕ್ ಎಂಬಾತನಿಗೆ ಪುತ್ತೂರು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ಘಟನೆಗೆ ಸಂಬಂಧಿಸಿ ಸುಳ್ಯ ಪೊಲೀಸರು ಜೂ.14 ರಂದು ಆರೋಪಿ ಅಶ್ಫಕ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬಳಿಕ ದಲಿತ ದೌರ್ಜನ್ಯ ಕಾಯಿದೆಯಡಿ ಕೇಸು ದಾಖಲಿಸಿಕೊಂಡ ಸುಳ್ಯ ಪೊಲೀಸರು ಆರೋಪಿಯನ್ನು ಪುತ್ತೂರು ವಿಭಾಗದ ಡಿ ವೈ ಎಸ್ ಪಿ ಯವರ ಸಮ್ಮುಖ ನಿನ್ನೆ ಸಂಜೆ ಹಾಜರು ಪಡಿಸಿದರು.
ಅಲ್ಲಿ ವಿಚಾರಣೆ ನಡೆದ ಬಳಿಕ ಆತನನ್ನು ಪುತ್ತೂರು ನ್ಯಾಯಾಲಯಕ್ಕೆ ಹಾಜರು ಪಡಿಸಿದಾಗ ನ್ಯಾಯಾಲಯವು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ.