ಕಾಂಗ್ರೆಸ್ ನಾಯಕರು ಸೇರಿದಂತೆ ಗಣ್ಯರು ಭಾಗಿ
ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ಘಟಕ ಮತ್ತು ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ಘಟಕ ವತಿಯಿಂದ ಪ್ರತಿಭಾನ್ವಿತ ಕಾಲೇಜು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮವು ಸುಳ್ಯದ ಯುವಜನ ಸಂಯುಕ್ತ ಮಂಡಳಿ ಸಭಾಭವನದಲ್ಲಿ ಜೂ.15 ರಂದು
ನಡೆಯಿತು.

ಬಳಿಕ ಅಹಮ್ಮದಾಬಾದ್ ಮಿಮಾನ ಪತನದಲ್ಲಿ ಮಡಿದವರಿಗೆ ಒಂದು ನಿಮಿಷ ಮೌನ ಪ್ರಾರ್ಥನೆ ಮಾಡಲಾಯಿತು.
ಬಳಿಕ ಸಭೆಯನ್ನು ಉದ್ದೇಶಿಸಿ ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ದಿನೇಶ್ ಮುಳೂರು ಮಾತನಾಡಿ ” ಶಿಕ್ಷಣ ಇದ್ರೆ ಮಾತ್ರ ದೇಶದ ಅಭಿವೃದ್ಧಿಯಾಗುತ್ತದೆ. ಜಾತಿ -ಬೇಧ ಭಾವ ಮರೆತು ನಾವೆಲ್ಲರೂ ಒಂದೇ ಎಂಬ ಮನೋಭಾವದಿಂದ ಇದ್ದು ಸಮಾಜದ ಅಭಿವೃದ್ಧಿಯೊಡನೆ ಬೆರೆತು ಸಮಾಜ ಸೇವೆಯನ್ನು ಮಾಡುವಂತಾಗಬೇಕು. ಅಲ್ಲದೆ ವಿದ್ಯಾರ್ಥಿಗಳು ಜೀವನದಲ್ಲಿ ಯಾವುದೇ ರೀತಿಯಲ್ಲಿ ಕೋಮುಗಲಭೆ, ಸಂಘರ್ಷಣೆಗಳಿಗೆ ಬಲಿಯಾಗದೆ , ಪೋಷಕರು ತಮ್ಮ ಮಕ್ಕಳನ್ನು ಒಳ್ಳೆಯ ದಾರಿಯಲ್ಲಿ ತಂದು ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಕೊಟ್ಟು ಪ್ರತಿಭಾವಂತ ವಿದ್ಯಾರ್ಥಿಯಾಗಿ ಮಾಡಬೇಕು. ಹಾಗೂ ಅಂಬೇಡ್ಕರ್ ಅವರ ಸಂವಿಧಾನದ ತತ್ವವನ್ನು ಅನುಸರಿಸಿ ಸಮಾಜಕ್ಕೆ ಮಾದರಿಯಾಗಿ ದೇಶ ಸೇವೆಯನ್ನು ಮಾಡಿ ಸಮಾಜದಲ್ಲಿ ಗುರುತಿಸುವಂತಾಗಬೇಕು” ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.















ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ , ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ ಶಹೀದ್ ತೆಕ್ಕಿಲ್ , ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾರ್ಮಿಕ ಇತರೆ ಮಂಡಳಿಯ ಸದಸ್ಯರು ಕೆ. ಪಿ. ಜಾನಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಬಳಿಕ 28 ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಧಾಕೃಷ್ಣ ಬೊಳ್ಳೂರು, ಸುಳ್ಯ ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ , ಸುಳ್ಯ ಬ್ಲಾಕ್ ಎಸ್ ಸಿ ಘಟಕದ ಅಧ್ಯಕ್ಷ ಮಹೇಶ್ ಬೆಳ್ಳಾರ್ಕರ್ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರೇಮನಾಥ , ರವಿ ಕುಮಾರ್ ,ಸುಳ್ಯ ತಾಲೂಕು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ.ಎಸ್ ಗಂಗಾಧರ ,ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ, ಕಿಸಾನ್ ಕಾಂಗ್ರೆಸ್ ನ ಸುರೇಶ್ ಅಮೈ , ನಗರ ಪಂಚಾಯತ್ ಮಾಜಿ ಉಪಾಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಗೋಕುಲ್ ದಾಸ್, ವಿಧಾನಸಭಾ ಕ್ಷೇತ್ರದ ಇಂಟಕ್ ಕಾಂಗ್ರೆಸ್ ಅಧ್ಯಕ್ಷರಾದ ಶಾಫಿ ಕುತ್ತಮೊಟ್ಟೆ, ,ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ, ಭೂ ನ್ಯಾಯ ಮಂಡಳಿಯ ಅನಸೂಯ, ಆಶಿಕ್ ಅರಂತೋಡು , ಅಬ್ಬಾಸ್, ಕೇಶವ ಮೊರo ಗಲ್ಲು, ಪಿ. ಆರ್ ಕರುಣಾಕರ ಪಲ್ಲ ತ್ತಡ್ಕ, ಯುವ ಕಾಂಗ್ರೆಸ್ ಉಪಾಧ್ಯಕ್ಷ ರಂಜಿತ್ ರೈ ಮೇನಾಲ ಸೇರಿದಂತೆ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ದೃತಿ ಪ್ರಾರ್ಥಿಸಿ, ಸುಳ್ಯ ಬ್ಲಾಕ್ ಎಸ್ ಸಿ ಘಟಕದ ಅಧ್ಯಕ್ಷ ಮಹೇಶ್ ಬೆಳ್ಳಾರ್ಕರ್ ಸರ್ವರನ್ನು ಸ್ವಾಗತಿಸಿ , ಕಾಂಗ್ರೆಸ್ ನಗರ ಅಧ್ಯಕ್ಷ ಶಶಿಧರ ಎಂ. ಜೆ ಕಾರ್ಯಕ್ರಮವನ್ನು ನಿರೂಪಿಸಿ , ವಂದಿಸಿದರು.










