ಇಂದು ಸುಬ್ರಹ್ಮಣ್ಯ ಗ್ರಾ.ಪಂ ನಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

0

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಹಾಗೂ ಲಯನ್ಸ್‌ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇವುಗಳ ಸಹಭಾಗಿತ್ವದಲ್ಲಿ ನ್ಯೂ ವಿಷನ್ ಜನರೇಷನ್ ಪ್ರೋಗ್ರಾಮ್ ಕಾರ್ಯಕ್ರಮದ ಅಡಿಯಲ್ಲಿ 2.5 ಎನ್.ವಿ.ಜಿ ಐ-ಮಿತ್ರ ಸುರತ್ಕಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ(ಅಂಧತ್ವ ವಿಭಾಗ) ಇವುಗಳ ಜಂಟಿ ಆಶ್ರಯದಲ್ಲಿ (ಜೂ.16 )ಇಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಬೆಳಗ್ಗೆಯಿಂದ ಸಂಜೆ 3:00 ಗಂಟೆಯವರೆಗೆ “ಕಣ್ಣಿನ ಉಚಿತ ತಪಾಸಣಾ ಶಿಬಿರ ನಡೆಯಲಿದೆ ಎಂದು ಸುಬ್ರಹ್ಮಣ್ಯ ಗ್ರಾ.ಪಂ ನವರು ತಿಳಿಸಿದ್ದಾರೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯುವಂತೆ ಕೋರಲಾಗಿದೆ.