ಅಮರ ಸಂಘಟನಾ ಸಮಿತಿ ಸುಳ್ಯ
ಇದರ ವತಿಯಿಂದ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದವಿದ್ಯಾರ್ಥಿಗಳಿಗೆ ಉಚಿತ ಕ್ರೀಡಾ ಸಮವಸ್ತ್ರವನ್ನು
ಜೂ.15 ರಂದು ವಿತರಿಸಲಾಯಿತು.
















ಅಮರ ಸಂಘಟನಾ ಸಮಿತಿಯ ಅಧ್ಯಕ್ಷ ಕುಸುಮಾಧರ ಮುಕ್ಕೂರು ಅಧ್ಯಕ್ಷತೆ ವಹಿಸಿದ್ದರು.
ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಕು| ಭಾಗಿರಥಿ ಮುರುಳ್ಯ ದೀಪ ಪ್ರಜ್ವಲಿಸಿದರು. ಬೆಳ್ಳಾರೆ ಠಾಣೆಯುಪನಿರೀಕ್ಷಕರಾದ ಈರಯ್ಯ ದೂಂತೂರು,
ಚೊಕ್ಕಾಡಿ ಪ್ರೌಢಶಾಲೆಯ ಸಂಚಾಲಕ ರಾಧಾಕೃಷ್ಣ ಬೊಳ್ಳೂರು,ಅಮರಮುಡ್ನೂರು ಪಂಚಾಯತ್ ಅಧ್ಯಕ್ಷೆಶ್ರೀಮತಿ ಜಾನಕಿ ಕಂದಡ್ಕ, ಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ವಿಶ್ವನಾಥ ಮೂಕಮಲೆ, ಮುಖ್ಯೋಪಾಧ್ಯಾಯರಾದ ಸಂಕೀರ್ಣ ಚೊಕ್ಕಾಡಿ, ಶಾಲಾ ಹಳೆ ವಿದ್ಯಾರ್ಥಿ ಸಂಘಧ ಅಧ್ಯಕ್ಷ ತೇಜಸ್ವಿ ಕಡಪಳ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಂಘದ ಕಾರ್ಯದರ್ಶಿ ಜಯಪ್ರಸಾದ್ ಸಂಕೇಶ ಸ್ವಾಗತಿಸಿ, ಕೀರ್ತನ್ ಪಾರೆ ವಂದಿಸಿದರು, ನಿರ್ದೇಶಕ ಶಶಿಕಾಂತ್ ಮಿತ್ತೂರು ಕಾರ್ಯಕ್ರಮ ನಿರೂಪಿಸಿದರು.
ಎಲ್ಲಾ ವಿದ್ಯಾರ್ಥಿಗಳಿಗೆ ರೂ. 39,000/- ಮೊತ್ತದ ಕ್ರೀಡಾ ಸಮವಸ್ತ್ರವನ್ನು ವಿತರಿಸಲಾಯಿತು.










