ಅಮರಮುಡ್ನೂರು ಗ್ರಾಮದ ದೊಡ್ಡತೋಟ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2025 -26ನೇ ಶೈಕ್ಷಣಿಕ ಸಾಲಿನ ಆರಂಭೋತ್ಸವ ಕಾರ್ಯಕ್ರಮ ಜೂ02 ರಂದು ನಡೆಯಿತು.
ಈ ಸಭೆಯ ಅಧ್ಯಕ್ಷ ಸ್ಥಾನವನ್ನು ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾದ ಜನಾರ್ದನ ಕುಂಟಿಕಾನ ಇವರು ವಹಿಸಿದ್ದರು.















ವೇದಿಕೆಯಲ್ಲಿ ಪಂಚಾಯಿತಿ ಸದಸ್ಯರುಗಳಾದ ಹೂವಪ್ಪ ಗೌಡ ಆರ್ನೋಜಿ, ಶ್ರೀಮತಿ ಪದ್ಮಪ್ರಿಯ ಮೇಲ್ ತೋಟ, ಶಾಲಾ ಮುಖ್ಯ ಗುರುಗಳಾದ ಶ್ರೀಮತಿ ಶೀಲಾವತಿ ಎ ಎಸ್ ಉಪಸ್ಥಿತರಿದ್ದರು.
ಶಾಲಾ ಮುಖ್ಯ ಗುರುಗಳು ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು.
ವೇದಿಕೆಯಲ್ಲಿ ಉಪಸ್ಥಿತರಿದ್ದ ಗಣ್ಯರು ಶುಭ ಹಾರೈಸಿದರು. ಅತಿಥಿಗಳಿಂದ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ಹಾಗೂ ಉಚಿತ ಸಮವಸ್ತ್ರ ವಿತರಿಸಲಾಯಿತು.
ಜನಾರ್ಧನ ಕುಂಟಿಕಾನ ಎಸ್ ಡಿಎಂಸಿ ಅಧ್ಯಕ್ಷರು ತಮ್ಮ ಮಗಳಾದ ದೃತಿಕೆ 6ನೇ ತರಗತಿ ಇವಳ ಹುಟ್ಟು ಹಬ್ಬದ ಪ್ರಯುಕ್ತ ಎಲ್ಲಾ ವಿದ್ಯಾರ್ಥಿಗಳಿಗೆ ನೋಟು ಪುಸ್ತಕ ಹಾಗೂ ಲೇಖನ ಸಾಮಗ್ರಿಗಳನ್ನು ಉಚಿತವಾಗಿ ನೀಡಿದರು.
ಸಹಶಿಕ್ಷಕಿ ಶ್ರೀಮತಿ ಚಂದ್ರಕಲಾ ಕೆ ಸಿ ವಂದಿಸಿದರು.
ಅತಿಥಿ ಶಿಕ್ಷಕರಾದ ಚಿದಾನಂದ ಎಸ್ ಕಾರ್ಯಕ್ರಮ ನಿರೂಪಿಸಿದರು.
ಶಿಕ್ಷಕರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.










