ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇಲ್ಲಿ ಜೂ.14 ರಂದು ಒಂದು ದಿನದ ಸಾಫ್ಟ್ ಸ್ಕಿಲ್ಸ್ ತರಬೇತಿ ಕಾರ್ಯಕ್ರಮ ನಡೆಯಿತು.
















ಈ ತರಬೇತಿ ಕಾರ್ಯಗಾರವನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರಾದ ಅಜಿತ್ ಕುಮಾರ್ ಉದ್ಘಾಟಿಸಿದರು . ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಹತ್ತನೇ ತರಗತಿಯ
ಕುಮಾರಿ ಶ್ರೀಯ ವಹಿಸಿದ್ದರು. ಕಾರ್ಯಕ್ರಮದ ವೇದಿಕೆಯಲ್ಲಿ ಶಾಲಾ ಅಧ್ಯಕ್ಷರಾದ ಗಣೇಶ್ ಪ್ರಸಾದ್, ಸಂಚಾಲಕರಾದ ಚಂದ್ರಶೇಖರ ನಾಯರ್, ರಾಜ್ಯ ತರಬೇತುದಾರರಾದ ದೀಪಕ್ ರಾಜ್, ಪ್ರಾಂಶುಪಾಲರಾದ ಡಾ. ಸಂಕೀರ್ತ ಹೆಬ್ಬಾರ್ ಉಪಸ್ಥಿತರಿದ್ದರು. ತರಬೇತಿಯ ಬೆಳಗಿನ ಅವಧಿಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಮಧ್ಯಾಹ್ನದ ನಂತರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಕುಮಾರಿ ಸುಶ್ಮಿತಾ ನಿರೂಪಿಸಿದರು.










