ಕೆದಂಬಾಡಿ ಗ್ರಾ.ಪಂ ಗ್ರೇಡ್-1 ಕಾರ್ಯದರ್ಶಿಅಂತರರಾಷ್ಟ್ರೀಯ ಕ್ರೀಡಾಪಟು ಸುನಂದ ರೈ ಕೇನ್ಯ ನಿಧನ

0

ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್‌ನ ಗ್ರೇಡ್-೧ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುನಂದ ರೈ ಕೇನ್ಯ(೫೫ವ)ರವರು ಅಲ್ಪ ಕಾಲದ ಅಸೌಖ್ಯದಿಂದಾಗಿ ಜೂ.೧೮ ರಂದು ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ನಿಧನರಾದರು. ಸುನಂದ ರೈಯವರು ಮೂಲರ್ತ ಸುಳ್ಯ ತಾಲೂಕಿನ ಕೇನ್ಯ ನಿವಾಸಿಯಾಗಿದ್ದು ೨೦೧೮ ರಿಂದ ಕೆದಂಬಾಡಿ ಗ್ರಾಮ ಪಂಚಾಯತ್‌ನಲ್ಲಿ ಗ್ರೇಡ್-೧ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪ್ರಸ್ತುತ ಇವರು ಕೆದಂಬಾಡಿ ಗ್ರಾಮದ ಕೊಡಂಗೋಣಿ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಸುನಂದ ರೈಯವರು ಆರಂಭದಲ್ಲಿ ಬಳ್ಪ ಗ್ರಾಮ ಪಂಚಾಯತ್‌ನಲ್ಲಿ ಸೇವೆಯನ್ನು ಪ್ರಾರಂಭಿಸಿ ಬಳಿಕ ಬೆಳ್ಳಾರೆ ಪಂಚಾಯತ್‌ನಲ್ಲಿ ಕರ್ತವ್ಯ ನಿರ್ವಹಿಸಿ ಅಲ್ಲಿಂದ ಗ್ರೇಡ್-೧ ಕಾರ್ಯದರ್ಶಿಯಾಗಿ ಭಡ್ತಿಗೊಂಡು ಕೆದಂಬಾಡಿ ಗ್ರಾಪಂಗೆ ವರ್ಗಾವಣೆಗೊಂಡಿದ್ದರು. ಸುನಂದ ರೈಯವರು ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುವಾಗಿ ಗುರುತಿಸಿಕೊಂಡಿದ್ದರು. ಶಾಲಾ ದಿನಗಳಲ್ಲೇ ಕ್ರೀಡೆಯಲ್ಲಿ ಗುರುತಿಸಿಕೊಂಡಿದ್ದ ಇವರು ಪಂಚಾಯತ್ ಕಾರ್ಯದರ್ಶಿಯಾದ ಬಳಿಕವೂ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಓಟ ಹಾಗೂ ರಿಲೇಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ಅಂತರರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದರು.
ಮೃತರು ಪತಿ ರತ್ನಾಕರ್, ಪುತ್ರ ಧನುಷ್ ಹಾಗೂ ಪುತ್ರಿ ನವ್ಯ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಪಾರ್ಥಿವ ಶರೀರವನ್ನು ಕೆದಂಬಾಡಿ ಕೊಡಂಗೋಣಿ ಮನೆಗೆ ತಂದು ಬಳಿಕ ಅವರ ಹುಟ್ಟೂರಿನಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.