ಅಭಿವೃದ್ಧಿಯಲ್ಲಿ ತಾರತಮ್ಯ ಇಲ್ಲ : ಸರಕಾರದ ಎಲ್ಲ ಯೋಜನೆ ದ.ಕ. ಜಿಲ್ಲೆಗೂ ತರುತ್ತೇವೆ : ಸಚಿವ ದಿನೇಶ್ ಗುಂಡೂರಾವ್ ಭರವಸೆ

0

ರೈತರ ಸಮಸ್ಯೆಗಳಿಗೆ ವಿಶೇಷ ಪ್ಯಾಕೇಜ್ ನೀಡಿ : ಶಾಸಕಿ‌ ಭಾಗೀರಥಿ ಮುರುಳ್ಯ ಮನವಿ

ಸುಳ್ಯದಲ್ಲಿ‌ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ

“ಇಲ್ಲಿ ನಮ್ಮ ಶಾಸಕರು ಇಲ್ಲ. ಅನುದಾನ ಇಲ್ಲ ಎನ್ನುವ ಮಾತುಗಳು ಬೇಡ. ನಮ್ಮ ಸರಕಾರ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ತಾರತಮ್ಯ ಮಾಡುವುದಿಲ್ಲ. ಸರಕಾರದಿಂದ ಬರುವ ಎಲ್ಲ ಯೋಜನೆಗಳು ದಕ್ಷಿಣ ಕನ್ನಡ ಜಿಲ್ಲೆಗೆ ಬರಬೇಕು. ಇಲ್ಲಿಯ ಪ್ರತಿನಿಧಿಯಾಗಿ ಅದನ್ನು ನಾನು ಕೊಡಿಸುತ್ತೇನೆ” ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಜೂ.18ರಂದು ಸುಳ್ಯದಲ್ಲಿ ವಿವಿಧ ಅಭಿವೃದ್ಧಿ ‌ಕಾಮಗಾರಿಗಳನ್ನು ಉದ್ಘಾಟನೆಗೊಳಿಸಿ, ಸುಳ್ಯ‌ನಗರ ಪಂಚಾಯತ್ ನಲ್ಲಿ ನಡೆದ ಹಕ್ಕುಪತ್ರ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸಿ, ಸುಳ್ಯದ ಅಭಿವೃದ್ಧಿ ಕುರಿತು ಸಚಿವರ ಮುಂದೆ ಬೇಡಿಕೆ ಇಟ್ಟ ಅವರು, ಸುಳ್ಯದ ರೈತರ ಸಮಸ್ಯೆಗಳ ಪರಿಹಾರಕ್ಕೆ ವಿಶೇಷ ಪ್ಯಾಜೇಜ್ ನೀಡುವಂತೆ ಮನವಿ ಮಾಡಿಕೊಂಡರು.

ನ.ಪಂ. ಅಧ್ಯಕ್ಷೆ ಶಶಿಕಲಾ ನೀರಬಿದಿರೆಯವರು ನಗರದ ಅಭಿವೃದ್ಧಿ ಕುರಿತು ರೂ.5 ಕೋಟಿ‌ವಿಶೇಷ ಅನುದಾನದ ಬೇಡಿಕೆ ಮುಂದಿಟ್ಟರು.

ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್‌ ಕುತ್ತಮೊಟ್ಟೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕೃಷ್ಣಪ್ಪ ಜಿಗಣಿ, ನ.ಪಂ. ಉಪಾಧ್ಯಕ್ಷ ಬುದ್ಧ‌ನಾಯ್ಕ್, ಸ್ಥಾಯಿ‌ಸಮಿತಿ ಅಧ್ಯಕ್ಷೆ ಕಿಶೋರಿ ಶೇಟ್, ಸದಸ್ಯರುಗಳಾದ ಎಂ.ವೆಂಕಪ್ಪ ಗೌಡ, ಉಮ್ಮರ್ ಕೆ.ಎಸ್., ಶರೀಫ್ ಕಂಠಿ, ಟಿ.ಎಂ.ಶಹೀದ್, ಡೇವಿಡ್ ಧೀರಾ ಕ್ರಾಸ್ತ, ರಿಯಾಜ್ ಕಟ್ಟೆಕಾರ್, ರಾಜು ಪಂಡಿತ್, ಸಿದ್ದೀಕ್ ಕೊಕ್ಕೊ, ಶೀಲಾ ಕುರುಂಜಿ, ಭಾಸ್ಕರ ಪೂಜಾರಿ ದುಗಲಡ್ಕ, ನ.ಪಂ. ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ, ಎ.ಸಿ.‌ಸ್ಟೆಲ್ಲಾ ವರ್ಗೀಸ್, ತಹಶೀಲ್ದಾರ್ ಮಂಜುಳಾ, ನ.ಪಂ.‌ಮುಖ್ಯಾಧಿಕಾರಿ ಸುಧಾಕರ್ ಮೊದಲಾದವರು ವೇದಿಕೆಯಲ್ಲಿ ಇದ್ದರು.