ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳು ಪ್ರತಿ ವರ್ಷದಂತೆ ಈ ವರ್ಷ ಶೈಕ್ಷಣಿಕ ಗ್ರಾಮೀಣ ಶಿಬಿರವನ್ನು ದ.ಕ.ಜಿ.ಪಂ.ಕಿ ಪ್ರಾ.ಶಾಲೆ ಮುಗೇರು-ಮಾಣಿಮಜಲು ಇಲ್ಲಿ ಜೂ. 18 ರಿಂದ 20 ರವರೆಗೆ ಹಮ್ಮಿಕೊಂಡಿದ್ದು, ಶೈಕ್ಷಣಿಕ ಗ್ರಾಮೀಣ ಶಿಬಿರದ ಉದ್ಘಾಟನೆಯನ್ನು ಕನಕಮಜಲು ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ಶಾರದಾ ಉಗ್ಗಮೂಲೆ
ನೆರವೇರಿಸಿ ಶುಭ ಹಾರೈಸಿದರು.

ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ದಿವಾಕರ ಕೆ. ವಹಿಸಿದ್ದರು.















ಕನಕಮಜಲು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರೋಜಿನಿ, ಕನಕಮಜಲು ಸೊಸೈಟಿ ಮಾಜಿ ಅಧ್ಯಕ್ಷ ನಾರಾಯಣ ಬೊಮ್ಮೆಟ್ಟಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀದರ ಕುತ್ಯಾಳ , ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿವೃತ್ತ ಉದ್ಯೋಗಿ ಶ್ರೀಮತಿ ಮೀನಾಕ್ಷಿ ಡಿ.ಎಸ್, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ರತಿ, ಎಸ್ ಡಿ ಯಂ ಸಿ ಉಪಾಧ್ಯಕ್ಷೆ ಶ್ರೀಮತಿ ಸಾವಿತ್ರಿ, ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ ಸಂಯೋಜಕಿ ಶ್ರೀಮತಿ ಶ್ರೀಮಣಿ ಉಪಸ್ಥಿತರಿದ್ದರು.
ಪ್ರಥಮ ವರ್ಷದ ವಿದ್ಯಾರ್ಥಿನಿ ಕು.ಪೂಜಾ ಕಾರ್ಯಕ್ರಮ ನಿರೂಪಿಸಿದರು. ಧನಿತ್ ಸ್ವಾಗತಿಸಿ, ಶಿಬಿರದ ನಾಯಕರಾದ ಸ್ವಸ್ತಿಕ್ ವಂದಿಸಿದರು.










