ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ಯಕ್ಷಧ್ರುವ – ಯಕ್ಷಶಿಕ್ಷಣ ಯೋಜನೆಯ 2025 – 26 ನೇ ಸಾಲಿನ ಯಕ್ಷಗಾನ ತರಗತಿಯು ಮೊರಾರ್ಜಿ ದೇಸಾಯಿ ವಸತಿಶಾಲೆ ಪಂಜ ಇಲ್ಲಿ ಆರಂಭಗೊಂಡಿದೆ.















ತರಗತಿಯನ್ನು ಪಟ್ಲ ಪೌಂಡೇಶನ್ ಪುತ್ತೂರು ಘಟಕದ ಸಂಚಾಲಕ ಪ್ರಶಾಂತ್ ರೈ ಪಲ್ಲೋಡಿ ದೀಪ ಬೆಳಗಿಸಿ ಉದ್ಘಾಟಿಸಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ ಶುಭಹಾರೈಸಿದರು.
ಪ್ರಭಾರ ಪ್ರಾಂಶುಪಾಲೆ ಶ್ರೀಮತಿ ರೂಪಲತ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಪೋಷಕರ ಸಮಿತಿಯ ಅಧ್ಯಕ್ಷ ದಾಮೋದರ ಗೌಡ ನೇರಳ, ಯಕ್ಷಗಾನ ಶಿಕ್ಷಕ ಗಿರೀಶ್ ಗಡಿಕಲ್ಲು, ಸಂಸ್ಥೆಯ ಅಧ್ಯಾಪಕ ವೃಂದ, ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕನ್ನಡ ಶಿಕ್ಷಕ ರವೀಂದ್ರ ನಾಯಕ್ ಕಾರ್ಯಕ್ರಮ ನಿರ್ವಹಿಸಿದರು.










