ಬೆಳ್ಳಾರೆಗೆ ಆಗಮಿಸಿದ ದ.ಕ.ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರಿಗೆ ಸ್ವಾಗತ

0

ಸುಳ್ಯ ಮತ್ತು ಬೆಳ್ಳಾರೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ಜೂ.17 ರಂದು ಆಗಮಿಸಿದ ದ.ಕ.ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರನ್ನು ಬೆಳ್ಳಾರೆಯಲ್ಲಿ ಸ್ವಾಗತಿಸಲಾಯಿತು.


ತುಳುನಾಡ ರಕ್ಷಣಾ ವೇದಿಕೆಯ ಸುಳ್ಯ ತಾಲೂಕು ಅಧ್ಯಕ್ಷರಾದ ಪ್ರಶಾಂತ್ ರೈ ಮರುವಂಜ ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಪ್ರವೀಣ ಮರುವಂಜ, ಅಶೋಕ್ ನೆಕ್ರಾಜೆ ಶಾಲು, ಹಾರ ಹಾಕಿ ಸ್ವಾಗತಿಸಿದರು.

ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ್ ಮೊದಲಾದವರು ಉಪಸ್ಥಿತರಿದ್ದರು.