
ರೈಟ್ ಟು ಲೈವ್ ಕೋಟೆ ಫೌಂಡೇಶನ್ ವತಿಯಿಂದ ಸುಳ್ಯ ಜೂನಿಯರ್ ಕಾಲೇಜಿನ ಪ್ರಥಮ ಮತ್ತು ದ್ವಿತೀಯ ಪಿಯುಸಿಯ ಎಲ್ಲಾ 700 ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಗಳನ್ನು ಉಚಿತವಾಗಿ ವಿತರಿಸಲಾಯಿತು.
















ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ರೈಟ್ ಟು ಲೈವ್ ಕೋಟೆ ಫೌಂಡೇಶನ್ ಇದರ ಸುಳ್ಯದ ಪ್ರತಿನಿಧಿಯಾಗಿರುವ ಪ್ರದೀಪ್ ಉಬರಡ್ಕ ಇವರು ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಿಸಿ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ಮೋಹನ ಗೌಡ ಬೊಮ್ಮೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವೇದಿಕೆಯಲ್ಲಿ ಹಿರಿಯ ಉಪನ್ಯಾಸಕರಾದ ಕೃಷ್ಣ ಪಿ ಉಪಸ್ಥಿತರಿದ್ದರು. ರಸಾಯನಶಾಸ್ತ್ರ ಉಪನ್ಯಾಸಕಿಯಾದ ಶ್ರೀಮತಿ ಸ್ಮಿತಾ ಭಾಸ್ಕರ್ ವಂದಿಸಿದರು.










