ಬೆಳ್ಳಾರೆ: ಶರತ್ ಜೋಶಿ ಸ್ಮರಣಾರ್ಥ ಉಚಿತ ಪುಸ್ತಕ ವಿತರಣೆ ಹಾಗೂ ಮಾಹಿತಿ ಕಾರ್ಯಕ್ರಮ

0

ಧನಾತ್ಮಕ ಚಿಂತನೆಯನ್ನು ಮೈಗೊಡಿಸಿಕೊಳ್ಳಿ – ಬಿ.ವಿ ಸೂರ್ಯನಾರಾಯಣ

ವಿದ್ಯೆ ಕೇವಲ ಧನಗಳಿಕೆಯ ಉದ್ದೇಶಕ್ಕೆ ಮೀಸಲಿಡದೆ, ಓದು ಪಠ್ಯ ಪುಸ್ತಕಕ್ಕೆ ಸೀಮಿತವಾಗಿಡದೆ ತಮ್ಮ ಬದುಕಿನ ಪಾಠವನ್ನು ಕಲಿಯುವುದರೊಂದಿಗೆ ವಿಶಾಲ ಹೃದಯವನ್ನು ಇನ್ನೊಬ್ಬರೊಂದಿಗೆ ಹಂಚಿಕೊಂಡು ಬಾಳ್ವೆ ನಡೆಸುವಂತಾಗಬೇಕು. ಆ ಮೂಲಕ ಬದುಕಿನಲ್ಲಿ ಸಾರ್ಥಕತೆಯನ್ನು ಹೊಂದಬೇಕು ಎಂದು ಸಂಪನ್ಮೂಲ ವ್ಯಕ್ತಿಯಾಗಿ ,ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಬಿ.ವಿ ಸೂರ್ಯನಾರಾಯಣ ಹೇಳಿದರು.

ಅವರು ಜೂ. 18ರಂದು ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದ ಶರತ್ ಜೋಶಿ ಸ್ಮರಣಾರ್ಥ 2ನೇ ವರ್ಷದ ಪುಣ್ಯತಿಥಿಯ ಅಂಗವಾಗಿ ಶರತ್ ಜೋಶಿ ಮೆಮೋರಿಯಲ್ ಟ್ರಸ್ಟ್ ಬೆಳ್ಳಾರೆ ಮತ್ತು ಶ್ರೀ ಸದಾಶಿವ ಚಾರಿಟೇಬಲ್ ಸೊಸೈಟಿ ಬೆಳ್ಳಾರೆ ಇದರ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಹಾಗೂ ಮಾಹಿತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎರಡೂ ಸಂಸ್ಥೆಗಳ ಅಧ್ಯಕ್ಷರಾದ ಬಿ. ಸುಬ್ರಹ್ಮಣ್ಯ ಜೋಶಿ ವಹಿಸಿ ಸ್ವಾಗತಿಸಿ, ಪ್ರಸ್ತಾವನೆ ಗೈದರು. ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಂ.ಸಿ. ಕಾರ್ಯಾಧ್ಯಕ್ಷ ಶ್ರೀನಾಥ್ ರೈ ಬಾಳಿಲ, ಗೌರವ ಉಪಸ್ಥಿತರಿದ್ದ ಪ್ರಾಂಶುಪಾಲ ಕೆ.ಎನ್ ಜನಾರ್ಧನ್, ಉಪ ಪ್ರಾಂಶುಪಾಲೆ ಉಮಾಕುಮಾರಿ ಹಾಗೂ ಹಿರಿಯ ಮುಖ್ಯ ಶಿಕ್ಷಕ ಮಾಯಿಲಪ್ಪ ಜಿ ರವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ವೇದಿಕೆಯಲ್ಲಿ ಶ್ಯಾಮಲಾ ಯಸ್ ಜೋಶಿ ಉಪಸ್ಥಿತರಿದ್ದರು‌.

ಉಚಿತ ನೋಟ್ ಬುಕ್ ವಿತರಣೆ: ಈ ಕಾರ್ಯಕ್ರಮದಲ್ಲಿ ಕೆಪಿಎಸ್ ನ 150 ವಿದ್ಯಾರ್ಥಿಗಳಿಗೆ ನೋಟ್ ಬುಕ್ ನ್ನು 2 ಸಂಸ್ಥೆಗಳ ವತಿಯಿಂದ ವಿತರಿಸಲಾಯಿತು. ಶ್ರೀರಾಂ ಪಾಟಾಜೆ ವಂದಿಸಿದರು. ನಿವೃತ್ತ ಉಪನ್ಯಾಸಕ ರಾಮಚಂದ್ರ ಭಟ್ ಮುಗುಳಿ ಕಾರ್ಯಕ್ರಮ ನಿರೂಪಿಸಿದರು.