ಕುಮಾರಸ್ವಾಮಿ ವಿದ್ಯಾಲಯದಲ್ಲಿ ಋತುಚಕ್ರದ ಆರೋಗ್ಯ ಮತ್ತು ಶುಚಿತ್ವದ ಬಗ್ಗೆ ಜಾಗೃತಿ ಕಾರ್ಯಕ್ರಮ

0

ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ, ರೋಟರಿ ಕ್ಲಬ್ ಸುಬ್ರಹ್ಮಣ್ಯ ಹಾಗೂ ರೋಟರಿ ಕ್ಲಬ್ ಮಹಾಲಕ್ಷ್ಮಿ ಸೆಂಟ್ರಲ್, ಬೆಂಗಳೂರು ಇವರ ಆಶ್ರಯದಲ್ಲಿ ನ್ಯಾಪ್ಕಿನ್ ಬರ್ನರ್ ಹಾಗೂ ವೆಂಡಿಂಗ್ ಮಿಷನ್ ಹಸ್ತಾಂತರ ಹಾಗೂ ಹೆಣ್ಣು ಮಕ್ಕಳ ಮಾಸಿಕ ಋತುಚಕ್ರದ ಆರೋಗ್ಯ ಮತ್ತು ಶುಚಿತ್ವದ ಬಗ್ಗೆ ಜಾಗೃತಿ ಕಾರ್ಯಕ್ರಮ ಜೂ.20 ರಂದು ನಡೆಯಿತು.

ರೋಟರಿ ಕ್ಲಬ್ ಮಹಾಲಕ್ಷ್ಮಿ ಸೆಂಟ್ರಲ್ ಇದರ ಅಧ್ಯಕ್ಷರಾದ ಶಿವಾನಂದ ಅವರು ಹಸ್ತಾಂತರ ಕಾರ್ಯಕ್ರಮ ನೆರವೇರಿಸಿದರು.
ಮುಟ್ಟಿನ ಆರೋಗ್ಯ ಮತ್ತು ನೈರ್ಮಲ್ಯ ನಿರ್ವಹಣೆ ಅಧ್ಯಕ್ಷರಾದ
ಶ್ರೀಮತಿ ಸೌಮ್ಯ ಶ್ರೀಕಾಂತ್ ಅವರು ಪ್ರೌಢಶಾಲಾ ಹಾಗೂ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿನಿಯರನ್ನು ಉದ್ದೇಶಿಸಿ ಮಾಸಿಕ ಋತುಚಕ್ರದ ಆರೋಗ್ಯ, ಶುಚಿತ್ವದ ಬಗ್ಗೆ ಸಮಗ್ರ ಮಾಹಿತಿ ನೀಡಿ ಜಾಗೃತಿ ನೀಡಿದರು.

ಬಳಿಕ ರೋಟರಿ ಕ್ಲಬ್ ಪೂನ ಡೈಮಂಡ್ ಅವರು ಕೊಡ ಮಾಡಿದ ಮರುಬಳಕೆ ಮಾಡಬಹುದಾದ ಸ್ಯಾನಿಟರಿ ನ್ಯಾಪ್ಕಿನ್ ಗೋಳನ್ನು ವಿದ್ಯಾರ್ಥಿನಿಯರಿಗೆ ವಿತರಿಸಲಾಯಿತು. ರೋಟರಿ ಕ್ಲಬ್ ಸುಬ್ರಹ್ಮಣ್ಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾಗೂ ಕುಮಾರಸ್ವಾಮಿ ವಿದ್ಯಾಲಯದ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.