








ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರದ ಆಪರೇಷನ್ ಥಿಯೇಟರ್ ನಲ್ಲಿ 3D 4k ರುಬಿನಾ ಕಾರ್ಲ್ ಸ್ಟೋರ್ಜ್(Rubina Karl Storz Laparoscopy) (ಜರ್ಮನಿ) ಲ್ಯಾಪರೊಸ್ಕೋಪಿ ಘಟಕವನ್ನು ಸ್ಥಾಪಿಸಲಾಗಿದ್ದು, ಜೂ.19 ರಂದು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ರಾದ ಡಾ. ಕೆ.ವಿ ಚಿದಾನಂದ ಘಟಕವನ್ನು ಅನಾವರಣಗೊಳಿಸಿದರು.
ಇದು ಲ್ಯಾಪರೊಸ್ಕೋಪಿ ಮೂಲಕ ಸಂಕೀರ್ಣ ಶಸ್ತ್ರಚಿಕಿತ್ಸೆಗಳನ್ನು ನಿರ್ವಹಿಸಲು ಸಹಾಯ ಮಾಡುತ್ತದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿಯೇ ಪ್ರಥಮ ಬಾರಿಗೆ ಈ ಉಪಕರಣವನ್ನು ಕೆವಿಜಿ ಮೆಡಿಕಲ್ ಕಾಲೇಜಿನಲ್ಲಿ ಅಳವಡಿಸಲಾಗಿದೆ ಎನ್ನಲಾಗಿದೆ. ಈ ಸಂದರ್ಭ ಎ.ಒ.ಎಲ್.ಇ. ಉಪಾಧ್ಯಕ್ಷೆ ಶೋಭಾ ಚಿದಾನಂದ, ಕೋಶಾಧಿಕಾರಿ ಡಾ. ಗೌತಮ್ ಗೌಡ, ಕಾಲೇಜಿನ ಡೀನ್ ಡಾ. ನೀಲಾಂಬಿಕೈ ನಟರಾಜನ್, ಮೆಡಿಕಲ್ ಸೂಪರಿಂಟೆಂಡೆಂಟ್ ಡಾ. ಸಿ ರಾಮಚಂದ್ರ ಭಟ್, ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ ವಿಭಾಗ ಮುಖ್ಯಸ್ಥರಾದ ಡಾ. ಗೀತಾ ದೊಪ್ಪ, ಪೆಲ್ವಿಕ್ ಲ್ಯಾಪರೊಸ್ಕೋಪಿಕ್ ಸರ್ಜನ್ ಪ್ರೊ. ಡಾ. ರವಿಕಾಂತ್ ಜಿ.ಒ, ಡಾ. ಸುಬ್ರಹ್ಮಣ್ಯ ಸೇರಿದಂತೆ ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು ಉಪಸ್ಥಿತರಿದ್ದರು.










