














ಸ.ಉ.ಹಿ ಪ್ರಾ.ಶಾಲೆ ಜಾಲ್ಸೂರು ಇಲ್ಲಿಗೆಸುಂದರ ಭಾರತ ಪ್ರತಿಷ್ಠಾನ ಬೆಂಗಳೂರು ಇದರ ವತಿಯಿಂದ ಸರಕಾರಿ ಶಾಲೆಗಳಿಗೆ ಒದಗಿಸಿದ ಉಚಿತ ನೋಟ್ ಪುಸ್ತಕಗಳ ವಿತರಣಾ ಕಾರ್ಯಕ್ರಮ ಜೂನ್ 20ರಂದು ನಡೆಯಿತು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಗಣೇಶ ಎ ಇವರು ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಿ ಶಾಲಾ ವಿದ್ಯಾರ್ಥಿಗಳ ಭವಿಷ್ಯಕ್ಕೆ ಪೂರಕವಾಗಲಿ , ಸದ್ವಿನಿಯೋಗ ವಾಗಲಿ ಎಂದು ಹಾರೈಸಿದರು. ಸುಂದರ ಭಾರತ ಪ್ರತಿಷ್ಠಾನ ಮತ್ತು ವಿದ್ಯಾರ್ಥಿಗಳಿಗೆ ಪುಸ್ತಕ ತಲುಪಿಸುವಲ್ಲಿ ನಿರಂತರ ಶ್ರಮಿಸಿದ ಜಲಜಾಕ್ಷಿ ಮೇಡಂ ಅವರಿಗೂ ಧನ್ಯವಾದ ಅರ್ಪಿಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರು ಸಹ ಶಿಕ್ಷಕರು ಎಸ್ ಡಿ ಎಂ ಸಿ ಸದಸ್ಯರುಗಳು ಉಪಸ್ಥಿತರಿದ್ದರು.










