ಯೋಗ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿರಲಿ : ಮೌರ್ಯ ಆರ್. ಪ್ರಸಾದ್

ಕೆವಿಜಿ ಅಮರಜ್ಯೋತಿ ಪಿಯು ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.















ಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರರವರು ಕಾರ್ಯಕ್ರಮಕ್ಕೆ ಸ್ವಾಗತ ಕೋರಿ ಶುಭ ಹಾರೈಸಿದರು. ಸಂಸ್ಥೆಯ ಟ್ರಸ್ಟಿ ಮೌರ್ಯ ಆರ್. ಕುರುಂಜಿರವರು ಯೋಗ ದಿನಾಚರಣೆಗೆ ಚಾಲನೆ ನೀಡಿದರು. ಹಾಗೂ ಯೋಗದ ಮಹತ್ವವನ್ನು ಹಾಗೂ ವಿಶ್ವದದ್ಯಂತ ಯೋಗ ಪಸರಿಸಿರುವ ಬಗ್ಗೆ ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು. ಕಾರ್ಯಕ್ರಮಕ್ಕೆ ಯೋಗ ತರಬೇತುದಾರಾರಾಗಿ ರಾಜೇಶ್ ಮತ್ತು ಶ್ರೀಮತಿ ನಿಶಿತಾ ಆಗಮಿಸಿದ್ದರು ಹಾಗೂ ವಿದ್ಯಾರ್ಥಿಗಳಿಗೆ ಯೋಗಭ್ಯಾಸದ ವಿವಿಧ ಆಸನಗಳನ್ನು ಮಾಡಿಸಿದರು.

ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟ್ ಡಾ. ರೇಣುಕಾ ಪ್ರಸಾದ್ ಕೆ.ವಿ., ಟ್ರಸ್ಟಿ ಡಾ. ಜ್ಯೋತಿ ಆರ್. ಪ್ರಸಾದ್, ಕಾಲೇಜಿನ ಸಿ ಇ ಒ ಡಾ. ಉಜ್ವಲ್ ಯು. ಜೆ. ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲರಾದ ದೀಪಕ್ ವೈ.ಆರ್., ಎಲ್ಲಾ ವಿದ್ಯಾರ್ಥಿಗಳು ಹಾಗೂ ಎಲ್ಲಾ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಯಾಶಿರ ಸ್ವಾಗತಿಸಿ, ಮಿಶ ವಂದಿಸಿದರು ಹಾಗೂ ಉಪನ್ಯಾಸಕಿ ಶ್ರೀಮತಿ ಮಲ್ಲಿಕಾ ಎಂ.ಎಲ್. ಕಾರ್ಯಕ್ರಮ ನಿರೂಪಿಸಿದರು.










