ತಾಲೂಕು ಕಾನೂನು ಸೇವೆಗಳ ಸಮಿತಿ ಸುಳ್ಯ,
ವಕೀಲರ ಸಂಘ ಸುಳ್ಯ, ಇವರ ಸಂಯುಕ್ತಾಶ್ರಯದಲ್ಲಿ
ಅಂತರಾಷ್ಟ್ರೀಯ ಯೋಗ ದಿನಾಚರಣೆ ಜೂ.21 ರಂದು ವಕೀಲರ ಸಂಘದ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷರು ಶ್ರೀ. ಬಿ ಮೋಹನ್ ಬಾಬು ಹಾಗೂ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿಯ ಸದಸ್ಯ ಕಾರ್ಯದರ್ಶಿ ಕು. ಅರ್ಪಿತಾ ರವರು ನೆರವೇರಿಸಿದರು.
ಈ ಸಂಧರ್ಭ ದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ವಕೀಲರ ಸಂಘದ ಅಧ್ಯಕ್ಷರಾದ ಸುಕುಮಾರ್ ಕೋಡ್ತುಗುಳಿ ಯವರು ವಹಿಸಿದ್ದರು.
















ಮುಖ್ಯ ಆತಿಥಿಗಳಾಗಿ ಸಹಾಯಕ ಸರ್ಕಾರಿ ಅಭಿಯೋಜಕ ರಮೇಶ್ ಆರ್ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಯೋಗ ತರಬೇತುದಾರರಾದ ಸಂತೋಷ್ ಮುಂಡಕಜೆ ಮತ್ತು ಶ್ರೀಮತಿ ಪ್ರಶ್ವಿಜಾ ಸಂತೋಷ್ ಮುಂಡಕಜೆರವರು ಭಾಗವಹಿಸಿ ಶಿಬಿರವನ್ನು ನಡೆಸಿದರು.
ವಕೀಲರುಗಳಾದ ಹರೀಶ್ ಬೂಡುಪನ್ನೆ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು, ಜಗದೀಶ್ ಡಿ ಪಿ ವಂದಿಸಿದರು.
ಕಾರ್ಯಕ್ರಮದಲ್ಲಿ ವಕೀಲರುಗಳು, ನ್ಯಾಯಾಲಯದ ಸಿಬ್ಬಂದಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳು ಭಾಗವಹಿಸಿದ್ದರು.










