
ಸುಬ್ರಹ್ಮಣ್ಯ ಗ್ರಾಮ ಪಂಚಾಯತ್, ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸೀನಿಯರ್ ಚೇಂಬರ್, ಸಂಜೀವಿನಿ ಒಕ್ಕೂಟ, ಅರಣ್ಯ ಇಲಾಖೆ, ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್, ಹಾಗೂ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ವಿಶ್ವ ಸಾಮೂಹಿಕ ಯೋಗ ಆಚರಣೆಯನ್ನು ಶನಿವಾರ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಸಲಾಯಿತು.
















ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಜಾತ ಕಲ್ಲಾಜೆ ದೀಪ ಬೆಳಗಿಸುವುದರ ಮೂಲಕ ಶಿಬಿರವನ್ನು ಉದ್ಘಾಟಿಸಿ, ದೇಹ, ಮನಸ್ಸು, ಮತ್ತು ಉಸಿರಾಟವನ್ನು ಏಕಾಗ್ರತೆಯಲಿ ಒಂದುಗೂಡಿಸಿ ಮಾಡುವ ಯೋಗವು ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳುವುದರಲ್ಲಿ ಯಾವುದೇ ಸಂದೇಹ ಇಲ್ಲ. ಯೋಗದಿಂದ ನಮ್ಮ ಇಡೀ ದೇಹವು ಉಲ್ಲಾಸಗೊಳ್ಳುತ್ತದೆ, ದಿನನಿತ್ಯದ ಎಲ್ಲಾ ಕಾರ್ಯ ಚಟುವಟಿಕೆಗಳು ನಿರಾಸದಾಯಕವಾಗಿ ಸಾಗುತ್ತದೆ. ಆದ್ದರಿಂದ ಎಲ್ಲರೂ ದಿನಂಪ್ರತಿ ಯೋಗಾಭ್ಯಾಸ ಮಾಡುವುದರೊಂದಿಗೆ ಆರೋಗ್ಯವನ್ನ ಹತೋಟಿಯಲ್ಲಿಟ್ಟುಕೊಳ್ಳಬೇಕೆಂದು ಶುಭ ಹಾರೈಸಿದರು.

ಇಲಾಖಾ ವತಿಯಿಂದ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ವಿಮಲ್ ಬಾಬು, ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸೀನಿಯರ್ ಚೇಂಬರ್ ಅಧ್ಯಕ್ಷ ವೆಂಕಟೇಶ್ ಎಚ್ ಎಲ್, ರವಿಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕ ಡಾl ರವಿಕಕ್ಕೆ ಪದವ್, ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸೀನಿಯರ್ ಚೇಂಬರ್ ಸ್ಥಾಪಕ ಅಧ್ಯಕ್ಷ ವಿಶ್ವನಾಥ ನಡುತೋಟ, ಎಸ್ ಪಿ ವೈ ಎಸ್ ಎಸ್ ಸುಬ್ರಹ್ಮಣ್ಯ ಶಾಖ ಸಂಚಾಲಕ ಪ್ರಭಾಕರ ಪಡ್ರೆ, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಕಾರ್ಯದರ್ಶಿ ಮೋನಪ್ಪ ಡಿ, ಸಂಜೀವಿನಿ ಒಕ್ಕೂಟದ ಅಧ್ಯಕ್ಷೇ ರತ್ನ ನೂಚ್ಚಿಲ, ಸುಬ್ರಹ್ಮಣ್ಯ ಶ್ರೀ ಪತಂಜಲಿ ಯೋಗ ಶಿಕ್ಷಣಸಮಿತಿಯ ಯೋಗ ಬಂಧುಗಳು, ವಿವಿಧ ಇಲಾಖೆ ಹಾಗೂ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಿಬ್ಬಂದಿ ಗಳು ಯೋಗಭ್ಯಾಸದಲ್ಲಿ ಪಾಲ್ಗೊಂಡರು.










