ಎಂ.ಜಿ.ಎಂ.‌ವಿದ್ಯಾಸಂಸ್ಥೆಯಲ್ಲಿ ಪೋಷಕರ ಸಭೆ

0

ಸುಳ್ಯದ‌ ಕೊಡಿಯಾಲಬೈಲು ಮಹಾತ್ಮ ಗಾಂಧಿ ಮಲ್ನಾಡ್ ವಿದ್ಯಾಸಂಸ್ಥೆಯಲ್ಲಿ 2025 -26 ನೇ ಸಾಲಿನ ಪ್ರಥಮ ಪೋಷಕರ ಸಭೆ ಜೂ.21ರಂದು ನಡೆಯಿತು.

ಸಂಸ್ಥೆಯ ಅಧ್ಯಕ್ಷರಾದ ಪಿಎಸ್ ಗಂಗಾಧರ ಇವರು ದೀಪ ಬೆಳಗಿಸಿ ಉದ್ಘಾಟನೆ ಮಾಡಿ, ಶುಭ ಹಾರೈಸಿದರು. ಸಂಸ್ಥೆಯ ಸಂಚಾಲಕರಾದ ದೊಡ್ಡಣ್ಣ ಬರೆಮೇಲು ಇವರು ಉಪಸ್ಥಿತರಿದ್ದು ಪೋಷಕರೊಂದಿಗೆ ಸಂವಾದ ನಡೆಸಿದರು. ಪೋಷಕರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.
ಈ ಸುಸಂದರ್ಭದಲ್ಲಿ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷರಾದ ಹರಿಪ್ರಸಾದ್ ಪಾನತ್ತಿಲ, ಉಪಾಧ್ಯಕ್ಷರಾದ ಶ್ವೇತ ಹಾಗೂ ಶಿಕ್ಷಕರಕ್ಷಕ ಸಂಘದ ಸದಸ್ಯರುಗಳು, ಸಂಸ್ಥೆಯ ಮುಖ್ಯ ಶಿಕ್ಷಕಿ ಶ್ರೀಮತಿ ವಿಜಯಲಕ್ಷ್ಮಿ, ಹಿರಿಯ ಶಿಕ್ಷಕಿ ಶ್ರೀಮತಿ ಚಿತ್ರಲೇಖ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಂಸ್ಥೆಯ ಎಲ್ಲಾ ಶಿಕ್ಷಕ ವೃಂದದವರು ಮತ್ತು ಪೋಷಕ ವೃಂದದವರು ಉಪಸ್ಥಿತರಿದ್ದರು.