
ಜೇಸಿಐ ಬೆಳ್ಳಾರೆ ಮತ್ತು ಪತಂಜಲಿ ಯೋಗ ಸಮಿತಿ ಬೆಳ್ಳಾರೆಯ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಯೋಗ ತರಬೇತಿ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ನಡೆಯಿತು. ಬೆಳ್ಳಾರೆ ಜೇಸಿಐನ ಪೂರ್ವಾಧ್ಯಕ್ಷ ಪದ್ಮನಾಭ ಕಲಾಸುಮ ಕಾರ್ಯಕ್ರಮವನ್ನು ಉದ್ಘಾಟಿಸಿದರು.








ಪತಂಜಲಿ ಯೋಗ ಸಮಿತಿಯ ಯೋಗ ಶಿಕ್ಷಕರುಗಳಾದ ಪ್ರಸಾದ್ ಸೇವಿತ, ಕವಿತಾ, ತಾರಾ ಯೋಗ ತರಬೇತಿ ನೀಡಿದರು. ಅಧ್ಯಕ್ಷ ಪ್ರದೀಪ್ ಕುಮಾರ್ ರೈ ಬೀಡು ಸ್ವಾಗತಿಸಿ, ಜ್ಞಾನದೀಪ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ವಂದಿಸಿದರು.











