ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ 11ನೆಯ ಅಂತರಾಷ್ಟ್ರೀಯ “ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ” ದಿನಾಚರಣೆಯನ್ನು ಶಾಲಾ ಆವರಣದಲ್ಲಿ ಆಚರಿಸಲಾಯಿತು.

ಶಾಲಾ ಪ್ರಾಂಶುಪಾಲರಾದ ಶ್ರೀಮತಿ ಶೋಭಾ ಕಿಶೋರ್, ವಿದ್ಯಾರ್ಥಿಗಳು, ಶಿಕ್ಷಕರು ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಯೋಗವು ಭಾರತೀಯ ಪರಂಪರೆಯ ಅತ್ಯುತ್ತಮ ಅಮೂಲ್ಯ ಕೊಡುಗೆಗಳಲ್ಲಿ ಒಂದಾಗಿದ್ದು ಅದು ಕೇವಲ ವ್ಯಾಯಾಮವಲ್ಲ ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವನ್ನು ಸಾಧಿಸುವ ದಾರಿ ಎಂದು ಯೋಗ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು.















ಶಿಕ್ಷಕಿ ವಾಣಿ ಕೆ. ಹಾಗೂ ಸಹ ಶಿಕ್ಷಕಿ ಕುಮಾರಿ ಡೀನಾರವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಯೋಗಾಭ್ಯಾಸವನ್ನು ಮಾಡಿದರು.
ಈ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಶೋಭಾ ಕಿಶೋರ್, ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.










