
ಸುಳ್ಯದ ಸೈಂಟ್ ಬ್ರಿಜಿಡ್ಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 11ನೇ ಅಂತರಾಷ್ಟ್ರೀಯ ಯೋಗದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಕೆ.ವಿ.ಜಿ ತಾಂತ್ರಿಕ ವಿದ್ಯಾಲಯದ ಎಂಬಿಎ ವಿಭಾಗದ ಮುಖ್ಯಸ್ಥರಾದ ಕೃಷ್ಣಾನಂದ.ಯಂ ರವರು ಯೋಗ ಕಾರ್ಯಕ್ರಮವನ್ನು ಉದ್ಘಾಟಿಸಿ ಮಕ್ಕಳಿಗೆ ಯೋಗದ ಪ್ರಾತ್ಯಕ್ಷಿಕೆಯನ್ನು ನೀಡಿದರು.
















ಅತಿಥಿಯಾಗಿ ಶಾಲಾ ಶಿಕ್ಷಕಿಯಾಗಿರುವ ಶ್ರೀಮತಿ ಪಾವನರವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಯೋಗದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡರು.
ವೇದಿಕೆಯಲ್ಲಿ ಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ಅಂತೋನಿ ಮೇರಿಯವರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ದೈಹಿಕ ಶಿಕ್ಷಣ ಶಿಕ್ಷಕ ಉಮೇಶ್ ಪಂಜದಬೈಲು ಸ್ವಾಗತಿಸಿ, ಸಹಶಿಕ್ಷಕಿ ಶ್ರೀಮತಿ ಸ್ಮಿತಾ ವಂದಿಸಿ, ಶ್ರೀಮತಿ ದೀಪಿಕಾ ಕಾರ್ಯಕ್ರಮವನ್ನು ನಿರೂಪಿಸಿದರು.
ಶಿಕ್ಷಕಿ ಶ್ರೀಮತಿ ವಲ್ಸ, ಸಿಸ್ಟರ್ ಗ್ರೇಸಿ, ಶ್ರೀಮತಿ ಸುರೇಖ ಹಾಗೂ ಎಲ್ಲಾ ಶಿಕ್ಷಕ ವರ್ಗದವರು ಸಹಕರಿಸಿ ಮತ್ತು ಎಲ್ಲಾ ವಿದ್ಯಾರ್ಥಿಗಳು ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.










