ಗ್ರೀನ್ ವ್ಯೂ ಶಾಲೆಯಲ್ಲಿ ಯೋಗ ದಿನಾಚರಣೆ

0

ಸುಳ್ಯ ಗ್ರೀನ್ ವ್ಯೂ ವಿದ್ಯಾ ಸಂಸ್ಥೆ ಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.

ಕಾರ್ಯಕ್ರಮವನ್ನು ಸಂಸ್ಥೆಯ ನಿರ್ದೇಶಕರಾದ ಹಾಗೂ ಸುಳ್ಯ ನಗರ ಸೂಡ ಅಧ್ಯಕ್ಷರಾದ ಕೆ ಎಂ ಮುಸ್ತಫ ಇವರು ಉದ್ಘಾಟಿಸಿ ಮಕ್ಕಳಿಗೆ ಶುಭ ಹಾರೈಸಿದರು.

ಶಾಲಾ ಮುಖ್ಯೋಪಾಧ್ಯಾಯರಾದ ಇಲ್ಯಾಸ್ ಕೆ ಕಾಶಿಪಟ್ಣ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಯೋಗ ಪಟು ಕುಮಾರಿ ಹಾರ್ದಿಕ ಕೆರೆಕೋಡಿ ಯವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಯೋಗ ಪ್ರಸ್ತುತಪಡಿಸಿ ಗಮನ ಸೆಳೆದರು.

ಶಾಲೆಯ ಮಕ್ಕಳು ಹಲವು ಯೋಗಾಸನ ಮಾಡಿ ಮೆರುಗು ನೀಡಿದರು. ಹಿರಿಯ ಶಿಕ್ಷಕ ಮಂಜುನಾಥ್ ಕಾರ್ಯಕ್ರಮ ನಿರೂಸಿದರು. ಈ ಸಂಧರ್ಭದಲ್ಲಿ ಶಾಲೆಯ ಶಿಕ್ಷಕ ವೃಂದ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

ಶಿಕ್ಷಕಿ ಅಶ್ವಿನಿ ಧನ್ಯವಾದ ಸಲ್ಲಿಸಿದರು.