ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಯೋಗ ದಿನಾಚರಣೆ

0

ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಜೂ. 21ರಂದು ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.


ಬಾಳಿಲ ವಿದ್ಯಾಬೋಧಿನೀ ಎಜುಕೇಶನಲ್ ಸೊಸೈಟಿಯ ಅಧ್ಯಕ್ಷರಾದ ಯು. ರಾಧಾಕೃಷ್ಣ ರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ವಿದ್ಯಾರ್ಥಿಗಳೆಲ್ಲರೂ ಯೋಗ ಅಭ್ಯಾಸವನ್ನು ಮಾಡಿ ಜೀವನದಲ್ಲಿ ಏಕಾಗ್ರತೆಯನ್ನು ಹೆಚ್ಚಿಸಿಕೊಂಡು ಓದಿನ ಕಡೆಗೆ ಮಹತ್ವ ಕೊಡಬೇಕು ಎಂದು ಶುಭ ಹಾರೈಸಿದರು.

ವಿದ್ಯಾಸಂಸ್ಥೆಗಳ ಸಂಚಾಲಕರಾದ ಪಿ.ಜಿ.ಎಸ್.ಎನ್ ಪ್ರಸಾದ್ ಉಪಸ್ಥಿತರಿದ್ದು, ಶುಭ ಹಾರೈಸಿದರು. ಯೋಗ ಶಿಕ್ಷಕ ಮತ್ತು ಮುಖ್ಯೋಪಾಧ್ಯಾಯರಾದ ಉದಯಕುಮಾರ್ ರೈ ಎಸ್ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳೊಂದಿಗೆ ಯೋಗ ಪ್ರದರ್ಶನದ ನಿರ್ವಹಣೆಯನ್ನು ಮಾಡಿದರು. ಯೋಗ ಶಿಕ್ಷಕ ಅರವಿಂದ ಕೆ.ಜಿ ನಿರ್ವಹಿಸಿದ ಕಾರ್ಯಕ್ರಮವನ್ನು ದೈಹಿಕ ಶಿಕ್ಷಣ ಶಿಕ್ಷಕ ಹರಿಪ್ರಸಾದ್ ರೈ ಜಿ ವಂದಿಸಿದರು. ಪ್ರೌಢಶಾಲೆಯ ವಿದ್ಯಾರ್ಥಿಗಳು ಯೋಗಾಸನಭ್ಯಾಸದಲ್ಲಿ ತೊಡಗಿಸಿಕೊಂಡರು.