ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಜೂ. 21ರಂದು “ಸುವಿಚಾರ ಸಾಹಿತ್ಯ ಸಂಘ”ದ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು.
ಮುಖ್ಯ ಅತಿಥಿಗಳಾಗಿ ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಶ್ರೀಶಕುಮಾರ್ ಎಂ.ಕೆ ಭಾಗವಹಿಸಿ “ವಿದ್ಯಾಕುಸುಮ ಭಿತ್ತಿಪತ್ರಿಕೆ”ಯನ್ನು ಅನಾವರಣಗೊಳಿಸುವ ಮುಖಾಂತರ ಸುವಿಚಾರ ಸಾಹಿತ್ಯ ಸಂಘದ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ ನೀಡಿ, ನಡವಳಿಕೆ ಮತ್ತು ಸಂಸ್ಕಾರ ಎನ್ನುವ ವಿಷಯದ ಕುರಿತು ಉಪನ್ಯಾಸ ಮತ್ತು ಸಂವಾದ ನಡೆಸಿಕೊಟ್ಟರು.















ಸಂಸ್ಥೆಯ ವಿದ್ಯಾರ್ಥಿನಿಯರು ಆರಂಭಗೀತೆ ಹಾಡಿದರು. ಮುಖ್ಯ ಶಿಕ್ಷಕರಾದ ಉದಯಕುಮಾರ್ ರೈ ಎಸ್ ಸ್ವಾಗತಿಸಿದರು. ಸುವಿಚಾರ ಸಾಹಿತ್ಯ ಸಂಘದ ಸಂಯೋಜಕರಾದ ಸಹಶಿಕ್ಷಕ ಲೋಕೇಶ ಬಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾಬೋಧಿನೀ ಎಜ್ಯುಕೇಶನಲ್ ಸೊಸೈಟಿಯ ಅಧ್ಯಕ್ಷ ರಾಧಾಕೃಷ್ಣ ರಾವ್ ಯು ಸಭಾಧ್ಯಕ್ಷತೆಯನ್ನು ವಹಿಸಿದ್ದರು. ಸಂಚಾಲಕರಾದ ಪಿ.ಜಿ.ಎಸ್.ಎನ್ ಪ್ರಸಾದ್ ಕಾರ್ಯಕ್ರಮಕ್ಕೆ ಶುಭಕೋರಿದರು. ಎಸ್.ಡಿ.ಎಂ.ಸಿ ಅಧ್ಯಕ್ಷೆ ಶ್ರೀಮತಿ ಹರಿಣಾಕ್ಷಿ ಬರೆಮೇಲು ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಕು. ಗುರುಪ್ರಿಯ ಮತ್ತು ದೀಕ್ಷಾ ಕಾರ್ಯಕ್ರಮ ನಿರೂಪಿಸಿದರು. ಸುವಿಚಾರ ಸಾಹಿತ್ಯ ಸಂಘದ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.










