ಕರ್ನಾಟಕ ಅರಣ್ಯ ಇಲಾಖೆ ಸಹಭಾಗಿತ್ವದಲ್ಲಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನ ಹಾಗೂ ವನಮಹೋತ್ಸವ ಆಚರಣೆ ನಡೆಯಿತು.















ಬೆಳಗ್ಗೆ ಶಾಲಾ ಆವರಣದಲ್ಲಿ ಹಣ್ಣುಹಂಪಲು ಗಿಡ ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರಮ ಆಚರಿಸಲಾಯಿತು. ಆ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಪರಿಸರ ದಿನಾಚರಣೆ ಹಾಗೂ ವನ ಮಹೋತ್ಸವ ಕಾರ್ಯಕ್ರಮದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ ನಡೆಯಿತು. ಉಪ ವಲಯರಣ್ಯಾಧಿಕಾರಿ ಸಂದೀಪ್ ರವರು ಮಾಹಿತಿ ನೀಡಿದರು. ಸಭೆಯ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ಸುರೇಶ್ ಕಣೆಮರಡ್ಕ ವಹಿಸಿದ್ದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರತಿಮಾ ಹೆಬ್ಬಾರ್, ಗ್ರಾಮ ಪಂಚಾಯತ್ ಸದಸ್ಯೆ ಗೀತಾ ಶಿವಾಜಿನಗರ, ಅರಣ್ಯ ಇಲಾಖೆಯ ಪತ್ರಪ್ಪ, ಶಾಲಾ ಮುಖ್ಯೋಪಾಧ್ಯಾರಾದ ಮಂಜುಳಾ ಅತ್ಯಾಡಿ ವೇಧಿಕೆಯಲ್ಲಿ ಉಪಸ್ಥಿತರಿದ್ದರು.

ಗ್ರಾಮಾರಣ್ಯ ಸಮಿತಿ ಸದಸ್ಯರು, ಎಸ್ ಡಿ ಎಂ ಸಿ ಸದಸ್ಯರು ಪೋಷಕರು ಶಾಲಾ ವಿಧ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶಾಲಾ ಸಹಶಿಕ್ಷಕಿ ವನಿತಾಕುಮಾರಿ ಕಾರ್ಯಕ್ರಮ ನಿರೂಪಿಸಿದರು.










