ಯೇನೆಕಲ್ಲು ಪ್ರಾ.ಕೃ.ಪ.ಸ.ಸಂಘದ ಆಶ್ರಯದಲ್ಲಿ 11ನೇ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
















ಸುಬೇದಾರ್ ವಾಸುದೇವ ಬಾನಡ್ಕ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಯೇನೆಕಲ್ಲು ಸ.ಹಿ.ಪ್ರಾ. ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಕಮಲ ಯೋಗಭ್ಯಾಸ ನಡೆಸಿಕೊಟ್ಟರು. ಸಂಘದ ಅಧ್ಯಕ್ಷ ಭವಾನಿಶಂಕರ ಪೂಂಬಾಡಿ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರತನ್ ಕಲ್ಕುದಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಘದ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಊರವರು ಕಾರ್ಯಕ್ರಮದಲ್ಲಿ ಪಾಳ್ಗೊಂಡರು.










