ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಿಂದ ಮುಜರಾಯಿ ಸಚಿವರ ಭೇಟಿ

0

ಜೂ.30 ರಂದು ಸಚಿವ ರಾಮಲಿಂಗ ರೆಡ್ಡಿ ಸುಬ್ರಹ್ಮಣ್ಯಕ್ಕೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಅವರು ಜೂ.23 ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಅವರನ್ನು ಮಂಗಳೂರಿನಲ್ಲಿ ಭೇಟಿಯಾಗಿದ್ದಾರೆ.

ಅಲ್ಲದೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸುವಂತೆ ಕೇಳಿಕೊಂಡಿರುವುದಾಗಿ ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಜೂ.30 ರಂದು ಸಚಿವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಆಗಮಿಸಿ ದೇವಸ್ಥಾನದ ಕೆಲ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆಯನ್ನು ನೀಡಲಿರುವುದಾಗಿ ತಿಳಿದು ಬಂದಿದೆ.