ಸುಳ್ಯ ಎನ್ನೆoಪಿಯುಸಿಯಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚರಣೆ

0

ಸುಳ್ಯ ಎನ್ನೆoಪಿಯುಸಿಯಲ್ಲಿ ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಜೂಮ 26ರಂದು ನಡೆಯಿತು.


ಮಾದಕ ವಸ್ತುಗಳ ಉಪಯೋಗ ಮತ್ತು ಅಕ್ರಮ ಕಳ್ಳ ಸಾಗಣೆ ವಿರುದ್ಧದ ಅಂತಾರಾಷ್ಟ್ರೀಯ ದಿನದ ಅಂಗವಾಗಿ ನಶಾ ಮುಕ್ತ ಭಾರತ ಅಭಿಯಾನ ಪ್ರತಿಜ್ಞಾ ವಿಧಿಯನ್ನು ವಿದ್ಯಾರ್ಥಿ ಕ್ಷೇಮಾಧಿಕಾರಿ, ಕನ್ನಡ ಉಪನ್ಯಾಸಕಿ ಬೇಬಿ ವಿದ್ಯಾ ಪಿ.ಬಿ ಬೋಧಿಸಿದರು.


ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಅಧ್ಯಕ್ಷ ಡಾ. ಕೆ.ವಿ ಚಿದಾನಂದ, ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು, ಪದವಿ ವಿಭಾಗದ ಪ್ರಾಚಾರ್ಯರಾದ ಡಾ. ರುದ್ರ ಕುಮಾರ್, ಪಿಯು ವಿಭಾಗದ ಪ್ರಾಚಾರ್ಯರಾದ ಮಿಥಾಲಿ ಪಿ ರೈ, ಬೋಧಕ, ಬೋಧಕೇತರ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.