














ಪೆರುವಾಜೆ ಗ್ರಾಮದ ಪೆರುವಾಜೆಯಿಂದ ಮುರ್ಕೆತ್ತಿಗೆ ಸಂಪರ್ಕ ಕಲ್ಪಿಸುವ ಪಂಚಾಯತ್ ರಸ್ತೆ ಕೆಸರುಗದ್ದೆಯಾಗಿ ಪರಿವರ್ತನೆಗೊಂಡಿದ್ದು, ಸಂಬಂಧಿಸಿದ ಇಲಾಖೆಯವರು ರಸ್ತೆಯನ್ನು ದುರಸ್ತಿ ಪಡಿಸಿಕೊಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಈ ರಸ್ತೆ ಮುರ್ಕೆತ್ತಿ ಮೂಲಕ ಪಾಲ್ತಾಡಿಗೆ ಸಂಪರ್ಕವನ್ನು ಕಲ್ಪಿಸುತ್ತದೆ. ಸಾರ್ವಜನಿಕರು, ವಿದ್ಯಾರ್ಥಿಗಳು ಸೇರಿದಂತೆ ನೂರಾರು ಮಂದಿ ಪಾದಾಚಾರಿಗಳು ಮತ್ತು ವಾಹನ ಸವಾರರು ಈ ರಸ್ತೆಯನ್ನು ಬಳಕೆ ಮಾಡುತ್ತಿದ್ದು, ಸಂಬಂಧಿಸಿದ ಇಲಾಖೆಯವರು ಕೂಡಲೇ ರಸ್ತೆಯನ್ನು ದುರಸ್ತಿಪಡಿಸಬೇಕಾಗಿದೆ.










