ಸುಬ್ರಹ್ಮಣ್ಯ: ಬಸ್ ತಂಗುದಾಣದಲ್ಲಿ ಹೃದಯಾಘಾತದಿಂದ ಮೃತ್ಯು

0

ಐನೆಕಿದು ಗ್ರಾಮದ ಕುಜುಂಬಾರು ನಿವಾಸಿ ಡೀಕಯ್ಯ ಉಪ್ಪಳಿಕೆ ಎಂಬವರು ಜೂ.28 ರ ಸಂಜೆ ಸುಬ್ರಹ್ಮಣ್ಯ ಕೆ.ಎಸ್.ಆರ್.ಸಿ ಬಸ್ ನಿಲ್ದಾಣದಲ್ಲಿದ್ದಾಗ ಹೃದಯಾಘಾತವಾಗಿ ಮೃತ ಪಟ್ಟ ಘಟನೆ ವರದಿಯಾಗಿದೆ.

ಹೃದಯಾಘಾತವಾಗಿ ಬಿದ್ದ ಅವರನ್ನು ಕಡಬ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತಾದರೂ ಅದಾಗಲೇ ಅವರು ಮೃತ ಪಟ್ಟಿದ್ದರೆನ್ನಲಾಗಿದೆ. ಅವರಿಗೆ 55 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ವೇದಾವತಿ, ತಾಯಿ ಶಿವಮ್ಮ, ಕುಟುಂಬಸ್ಥರು, ಬಂಧುಗಳನ್ನು ಅಗಲಿದ್ದಾರೆ.