ಆಲೆಟ್ಟಿ(ನಾರ್ಕೋಡು)
ದ.ಕ.ಜಿ.ಪಂ.ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಥಮ ಹಂತದ ಪೋಷಕರ ಸಭೆಯು ಜೂ.23 ರಂದು ನಡೆಯಿತು.










ಈ ಸಂದರ್ಭದಲ್ಲಿ ಅಜ್ಜಾವರ ದೇವರ ಕಳಿಯ ಚೈತನ್ಯ ಸೇವಾಶ್ರಮದ ಯೋಗೇಶ್ವರಾನಂದ ಸರಸ್ವತಿ ಸ್ವಾಮೀಜಿಯವರ 223 ನೇ “ಮನಸ್ಸಿನಂತೆ ಮಾನವನು” ಎಂಬ ಕೃತಿ ಬಿಡುಗಡೆ ಮಾಡಲಾಯಿತು.
ಆಲೆಟ್ಟಿ ಸರಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿಜಯಲಕ್ಷ್ಮಿ ಯವರು ಪುಸ್ತಕ ಬಿಡುಗಡೆಗೊಳಿಸಿ ವಿದ್ಯಾರ್ಥಿಗಳು ಮೊಬೈಲ್ ಬಳಕೆ ದೂರವಿರಿಸಿ ಇಂತಹ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳುವಂತೆ ಕರೆ ನೀಡಿದರು.
ಸ್ವಾಮೀಜಿಯವರು ಕಾರ್ಯಕ್ರಮ ಉದ್ಘಾಟಿಸಿ
ಸುಂದರ ಭಾರತ್ ಪ್ರತಿಷ್ಠಾ ನದ ವತಿಯಿಂದ ಕೊಡಮಾಡಿದ ನೋಟ್ ಪುಸ್ತಕವನ್ನು ವಿತರಿಸಿ ಆಶೀರ್ವದಿಸಿದರು.
ಸಂಪನ್ಮೂಲ ವ್ಯಕ್ತಿ ಸುಳ್ಯ ಜೂನಿಯರ್ ಕಾಲೇಜ್ ಉಪ ಪ್ರಾಂಶುಪಾಲರಾದ ಪ್ರಕಾಶ್ ಮೂಡಿತ್ತಾಯ ರವರು ವಿದ್ಯಾರ್ಥಿಗಳಿಗೆ ಅವಶ್ಯಕ ವಿಚಾರಗಳ ಕುರಿತು ಮಾಹಿತಿ ಮಾರ್ಗದರ್ಶನ ನೀಡಿದರು.
ಪಂಚಾಯತ್ ಸದಸ್ಯ ಚಂದ್ರಕಾಂತ ನಾರ್ಕೋಡು, ಮುಖ್ಯ ಶಿಕ್ಷಕಿ ಶ್ರೀಮತಿ ಸುನಂದ ಜಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಬಾಲಚಂದ್ರ ಏಣಾವರ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕಿ ಶ್ರೀಮತಿ ಸುನಂದ ಜಿ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ರೇಖಾ ವಂದಿಸಿದರು. ಶಿಕ್ಷಕ ಸುನಿಲ್ ಕಾರ್ಯಕ್ರಮ ನಿರೂಪಿಸಿದರು. ಭೋದಕ ಮತ್ತು ಭೋದಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು
ಹಾಗೂ ಪೋಷಕರು ಭಾಗವಹಿಸಿದರು.










