














ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಜಾಲ್ಸೂರು ನಲ್ಲಿ ಜೂ.25ರಂದು ಯಕ್ಷಗಾನ ತರಬೇತಿಯ ಉದ್ಘಾಟನಾ ಸಮಾರಂಭ ನಡೆಯಿತು. ಉದ್ಘಾಟನೆಯನ್ನು ಶ್ರೀ ಭುವನೇಶ್ವರಿ ಯಕ್ಷಗಾನ ಕಲಾಮಂಡಳಿ ಸುಳ್ಯ ಇದರ ಸಂಚಾಲಕರಾದ ಕೋಡ್ಲ ಗಣಪತಿ ಭಟ್ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಯಕ್ಷಗಾನ ಪರಂಪರೆಯನ್ನು ಉಳಿಸಿ ಬೆಳೆಸುವ ಅಗತ್ಯತೆಗಾಗಿ ತರಬೇತಿಯನ್ನು ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡುತ್ತೇನೆಂದು ಗಣಪತಿ ಭಟ್ ತಿಳಿಸಿದರು.
ಸಭೆಯ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಗಣೇಶ ಎ. ರವರು ವಹಿಸಿದ್ದರು. ಸಭೆಯಲ್ಲಿ ಶಾಲಾ ಮುಖ್ಯ ಶಿಕ್ಷಕರು, ಎಸ್ ಡಿ. ಎಂ. ಸಿ ಸದಸ್ಯರುಗಳು ಪೋಷಕರು, ವಿದ್ಯಾರ್ಥಿಗಳು, ಅಕ್ಷರ ದಾಸೋಹ ಸಿಬ್ಬಂದಿಗಳು ಉಪಸ್ಥಿತರಿದ್ದರು. ಶಿಕ್ಷಕಿ ಕಾವ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಚರಿಷ್ಮಾ ರವರು ವಂದಿಸಿದರು.










