
ಅಜ್ಜಾವರ ಗ್ರಾಮದ ಮುಳ್ಯ ಅಟ್ಲೂರಿನ ಸ.ಉ.ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ,ಲೇಖನಿ ಸಾಮಾಗ್ರಿಗಳನ್ನು ಹಾಗೂ ಸಮವಸ್ತ್ರವನ್ನು ಜೂ.23 ರಂದು ವಿತರಿಸಲಾಯಿತು.















ಎಸ್.ಡಿ.ಎಂ.ಸಿ.ಅಧ್ಯಕ್ಷ ಚಂದ್ರಶೇಖರ ರವರು ಅಧ್ಯಕ್ಷತೆ ವಹಿಸಿದ್ದರು.
ಪ್ರಗತಿಪರ ಕೃಷಿಕರು ದಾನಿಗಳಾದ ರವಿಪ್ರಕಾಶ್ ಅಟ್ಲೂರು ರವರು ಕೊಡಮಾಡಿದ ನೋಟ್ ಪುಸ್ತಕ ಮತ್ತು ಲೇಖನಿ ಸಾಮಾಗ್ರಿಗಳನ್ನು ಶಾಲೆಯ 53 ಮಂದಿ ವಿದ್ಯಾರ್ಥಿಗಳಿಗೆ ನೀಡಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಅಲಕನಂದಿನಿ ಯವರ ಸಹೋದರಿ ಶ್ರೀಮತಿ ಸಕು ಆಚಾರ್ಯ ಬೆಂಗಳೂರು ರವರು ಕೊಡುಗೆಯಾಗಿ ನೀಡಿದ ಸಮವಸ್ತ್ರವನ್ನು ಎಲ್ಲಾ ವಿದ್ಯಾರ್ಥಿಗಳಿಗೆ ನೀಡಲಾಯಿತು.
ಮುಖ್ಯ ಶಿಕ್ಷಕಿ ಶ್ರೀಮತಿ ಅಲಕನಂದಿನಿ ಸ್ವಾಗತಿಸಿ, ಸಹ ಶಿಕ್ಷಕಿ ಸುಮನ ಕೆ.ಪಿ ವಂದಿಸಿದರು.
ಅದ್ಯಾಪಕ ವೃಂದದವರು, ಪೋಷಕರು, ಎಸ್.ಡಿ.ಎಂ.ಸಿ ಸದಸ್ಯರು, ವಿದ್ಯಾರ್ಥಿಗಳು ಭಾಗವಹಿಸಿದರು.



