ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಬಳ್ಪ ಗ್ರಾ.ಪಂ. ಆವರಣದಲ್ಲಿ ಪ್ರತಿಭಟನೆ ಜೂ. 23ರಂದು ನಡೆಯಿತು.















ಪಂಜ ಸಿ.ಎ. ಬ್ಯಾಂಕ್ ಮಾಜಿ ಅಧ್ಯಕ್ಷ ಹಾಲಿ ನಿರ್ದೇಶಕ
ಸುಬ್ರಹ್ಮಣ್ಯ ಕುಳ, ಬಳ್ಪ ಗ್ರಾ.ಪಂ. ಅಧ್ಯಕ್ಷ ಹರ್ಷಿತ್ ಕಾರ್ಜ, ಮತ್ತು ಬಳ್ಪ ಕೇನ್ಯ ಗ್ರಾಮ ವಿಕಾಸ ಪ್ರತಿಷ್ಠಾನದ ಅಧ್ಯಕ್ಷ ವಿನೋದ್ ಬೋಲ್ಮಳೆ ರಾಜ್ಯ ಸರಕಾರದ ವೈಫಲ್ಯಗಳನ್ನು ಹೇಳಿದರು. ಗ್ರಾ.ಪಂ. ಮಾಜಿ ಸದಸ್ಯ ರಮಾನಂದ ಎಣ್ಣೆಮಜಲು ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಪಂಚಾಯತ್ ಸದಸ್ಯರು, ಬಿಜೆಪಿ ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.










