ಮರ್ಕಂಜದಲ್ಲಿ ಕ್ರಿಕೆಟ್ ವಿಚಾರವಾಗಿ ವಾಟ್ಸಪ್ ನಲ್ಲಿ ಅವಾಚ್ಯ ಶಬ್ಧದಲ್ಲಿ ನಿಂದಿಸಿದ ಬಗ್ಗೆ ವಿಚಾರಿಸಲು ಮನೆಗೆ ತೆರಳಿ ಯುವಕನಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ನಾಲ್ವರು ಯುವಕರಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.















ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಯನ ಕುಮಾರ್ ರೈಯವರ ಅಣ್ಣ ಸುಂದರ ರವರು ಪ್ರಶಾಂತ್ ಆರ್ನಡ್ಕ, ಪ್ರಮೋದ್ ಬೊಳ್ಳಜೆ, ಚೇತನ್ ಜೋಗಿಮೂಲೆ, ಪ್ರಜ್ಞೇಶ್ ದೇಶಕೋಡಿ ಎಂಬವರು ಹಲ್ಲೆ ನಡೆಸಿರುವುದಾಗಿ ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದರು. ಅವರು ನೀಡಿದ್ದ ದೂರಿನ ಮೇರೆಗೆ ಸುಳ್ಯ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ ಈ ನಾಲ್ವರು ಆರೋಪಿಗಳು ತಲೆ ಮರೆಸಿಕೊಂಡಿದ್ದರು.
ಇದೀಗ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆರೋಪಿಗಳ ಪರ ವಕೀಲರಾದ ಮಹೇಶ್ ಕಜೆ ಮತ್ತು ಮಹೇಶ್ ಜೋಗಿ ಮಂಗಳೂರು ವಾದಿಸಿದ್ದರು.










