ಜಾಲ್ಸೂರು : ವಿಮಾ ಯೋಜನೆ ಬಗ್ಗೆ ಮಾಹಿತಿ ಕಾರ್ಯಕ್ರಮ

0

ಎಸ್ ಸಿಡಿಸಿಸಿ ಬ್ಯಾಂಕ್ ಜಾಲ್ಸೂರು, ಗ್ರಾಮ ಪಂಚಾಯಿತ್ ಜಾಲ್ಸೂರು ಸಹಕಾರದೊಂದಿಗೆ ರಾಜ್ಯಮಟ್ಟದ ಬ್ಯಾಂಕರ್ ಗಳ ಸಮಿತಿ ಕರ್ನಾಟಕ ಮತ್ತು ಕರ್ನಾಟಕ ಸರ್ಕಾರ ವತಿಯಿಂದ ಪ್ರಾಯೋಜಕತ್ವದಲ್ಲಿ
ಕೇಂದ್ರ ಸರ್ಕಾರದ ಯೋಜನೆಗಳಾದ ಪಿಎಮ್‍ಜೆಜಿಬಿವೈ ಮತ್ತು ಪಿಎಂಎಸ್ ಬಿವೈ ವಿಮಾ ಯೋಜನೆ ಬಗ್ಗೆ ಮಾಹಿತಿ ಕಾರ್ಯಕ್ರಮ ಜೂ. 27ರಂದು ಜಾಲ್ಸೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಸಾವಿತ್ರಿ ಅಡ್ಕಾರುಬೈಲು
ಸಭಾಧ್ಯಕ್ಷತೆ ವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ಕೆನರಾ ಬ್ಯಾಂಕ್ ನ ಆರ್ಥಿಕ ಸಾಕ್ಷರತಾ ಕೇಂದ್ರದ ಹಣಕಾಸು ಸಾಕ್ಷರತಾ ಆಪ್ತ ಸಮಾಲೋಚಕಿ ಶ್ರೀಮತಿ ಸುಜಾತ ಸಮಗ್ರ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಪಂಚಾಯತ್ ಉಪಾಧ್ಯಕ್ಷ ಶ್ರೀಮತಿ ತಿರುಮಲೇಶ್ವರಿ ಅರ್ಬಡ್ಕ, ಗ್ರಾಮ ಪಂಚಾಯಿತಿ ಪಿಡಿಓ ಚೆನ್ನಪ್ಪ ನಾಯ್ಕ,ಜಾಲ್ಸೂರಿನ ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಚಂದ್ರಶೇಖರ್ ಶೆಟ್ಟಿ, ಈಶ್ವರಮಂಗಲ ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ದಾಮೋದರ ಕೇನಾಜೆ ಉಪಸ್ಥಿತರಿದ್ದರು.

ಡಿಸಿಸಿ ಬ್ಯಾಂಕ್ ಪಿಗ್ಮಿ ಸಂಗ್ರಾಹಕ ಶೇಖರ ಕಾಳಮ್ಮನೆ ಕಾರ್ಯಕ್ರಮ ನಿರೂಪಿಸಿದರು. ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎಂ ಬಾಬು ವಂದಿಸಿದರು.

ನವೋದಯ ಪ್ರೇರಕಿ ಶ್ರೀಮತಿ ಸುಗಂಧಿ, ಡಿಸಿಸಿ ಬ್ಯಾಂಕ್ ಸಿಬ್ಬಂದಿ ಸುಮಂತ್, ನವೀನ್, ಪಿಗ್ಮಿ ಸಂಗ್ರಾಹಕ ದೀಕ್ಷಿತ್ ಸಹಕರಿಸಿದರು.