ಪುತ್ತೂರು ಗ್ರಾಮಾಂತರ ಠಾಣೆಯ ಎಎಸ್ಐ ಮಹಮ್ಮದಾಲಿ ಸೇವಾ ನಿವೃತ್ತಿ

0

ಪುತ್ತೂರು ಗ್ರಾಮಾಂತರ ಠಾಣೆಯ ಎಎಸ್ಐ ಮಹಮ್ಮದಾಲಿಯವರು ಜೂ. 30ರಂದು ಸೇವಾ ನಿವೃತ್ತಿಯಾಗಿದ್ದಾರೆ.

1993ರಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿ ಪೊಲೀಸ್ ಇಲಾಖೆಗೆ ಸೇರಿದ ಇವರು ಆರಂಭದಲ್ಲಿ ಸಂಚಾರ ಪೂರ್ವ ಠಾಣೆ ಮಂಗಳೂರು, ಕಡಬ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ಸಲ್ಲಿಸಿ ಪುತ್ತೂರು ನಗರ ಠಾಣೆ ಹೆಡ್ ಕಾನ್ಸ್ಟೇಬಲ್ ಆಗಿ ಭಡ್ತಿಗೊಂಡರು. ಬಳಿಕ ಸುಳ್ಯ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ, ಕಡಬ ಪೊಲೀಸ್ ಠಾಣೆಯಲ್ಲಿ ಎಎಸ್ಐ ಯಾಗಿ ಭಡ್ತಿಗೊಂಡರು. ಬಳಿಕ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಸೇವೆಯಲ್ಲಿದ್ದ ಇವರು ಸುದೀರ್ಘ 32 ವರ್ಷಗಳ ಸೇವೆಯಿಂದ ನಿವೃತ್ತರಾಗಿದ್ದಾರೆ.

ಪ್ರಸ್ತುತ ಎಡಮಂಗಲ ಗ್ರಾಮದ ಎಣ್ಮೂರಿನಲ್ಲಿ ವಾಸವಾಗಿದ್ದಾರೆ. ಇವರ ಪತ್ನಿ ಜಸೀಲ ಗೃಹಿಣಿಯಾಗಿದ್ದಾರೆ. ಮಗ ಮರ್ಶಿನ್ ಅಹಮ್ಮದ್ ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದಾರೆ.
ಇನ್ನೊಬ್ಬ ಮಗ ಮನಾಝ್ ಅಹಮ್ಮದ್ ಬಿಸಿಎ ಪದವಿ ಪೂರೈಸಿದ್ದಾರೆ.