ಸ್ಪಂದಿಸದಿದ್ದಲ್ಲಿ ಜು 14 ರಂದು ಸುಳ್ಯ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ಮಾಡುವ ಬಗ್ಗೆ ಎಚ್ಚರಿಕೆ









ಮರಳು ಹಾಗೂ ಕೆಂಪು ಕಲ್ಲು ಪೂರೈಕೆ ಮೇಲೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಕೈಗೊಂಡಿರುವಂತಹ ಕಠಿಣ ಕ್ರಮಗಳನ್ನು ಸಡಿಲಗೊಳಿಸಿ ಕೊಡಬೇಕು ಇಲ್ಲದಿದ್ದಲ್ಲಿ ಸುಳ್ಯ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ಮಾಡಿವುದಾಗಿ ಸಂಘದ ಮುಖಂಡರುಗಳು ಜು.೨ ರಂದು ತಾಲೂಕು ಕಚೇರಿಗೆ ತೆರಳಿ ತಹಶೀಲ್ದಾರ್ ಬಳಿ ಮನವಿಯನ್ನು ನೀಡಿದ್ದಾರೆ. ಸುಳ್ಯ ಉಪ ತಹಶೀಲ್ದಾರ್ ಮಂಜುನಾಥ್ ರವರು ಮನವಿ ಸ್ವೀಕರಿಸಿದರು.
ಜಿಲ್ಲಾಡಳಿತಕ್ಕೆ ಹಾಗೂ ಸಂಸದರಿಗೆ ಹಾಗೂ ಶಾಸಕರಿಗೆ ಅದೇ ರೀತಿ ರಾಜ್ಯ ಸರ್ಕಾರಕ್ಕೆ,ರಾಜ್ಯ ಪಾಲರಿಗೆ ಮನವಿಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಭಾರತೀಯ ಮಜ್ದೂರ್ ಸಂಘದ ಕಟ್ಟಡ ನಿರ್ಮಾಣ ಕಾರ್ಮಿಕರ ಘಟಕದ ಸುಳ್ಯ ತಾಲೂಕು ಅಧ್ಯಕ್ಷರಾದ ಮಧುಸೂಧನ ಹಾಗೂ ಪ್ರಧಾನ ಕಾರ್ಯದರ್ಶಿ ಅನಿಲ್ ಮಂಡೆಕೋಲು, ಸದಸ್ಯರುಗಳಾದ ದಿನೇಶ್, ಹರೀಶ್ ಕಾಯರ್ತೋಡಿ, ಮಧುಸೂದನ್ ಉಬರಡ್ಕ ಉಪಸ್ಥಿತರಿದ್ದರು.










