ಮುಳ್ಯ ಅಟ್ಲೂರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಕೋ ಕ್ಲಬ್, ಕರ್ನಾಟಕ ಅರಣ್ಯ ಇಲಾಖೆ, ದ. ಕ ಜಿಲ್ಲಾ ಪಂಚಾಯತ್, ಸಾಮಾಜಿಕ ಅರಣ್ಯ ವಿಭಾಗ ಸುಳ್ಯ ಇವುಗಳ ಜಂಟಿ ಆಶ್ರಯ ದಲ್ಲಿ ವನ ಮಹೋತ್ಸವ ಕಾರ್ಯಕ್ರಮ ನಡೆಯಿತು.















ಸುಳ್ಯ ಸಾಮಾಜಿಕ ಉಪ ವಲಯ ಅರಣ್ಯ ಅಧಿಕಾರಿ ವಿ ಎಚ್ ಕರಣಿಮಠ ಇವರ ನೇತೃತ್ವ ದಲ್ಲಿ ಕಾರ್ಯಕ್ರಮ ನಡೆದು ವಿದ್ಯಾರ್ಥಿಗಳಿಗೆ ವನ ಮಹೋತ್ಸವದ ಕುರಿತು ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ಚಂದ್ರಶೇಖರ್ ರವರು ವಹಿಸಿದ್ದರು.ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಅಲಕ ನಂದಿನಿ ಶಾಲಾ ವಠಾರಾಡಲ್ಲಿ ಹಣ್ಣಿನ ಗಿಡಗಳನ್ನು ನೆಟ್ಟು ಕಾರ್ಯಕ್ರಮ ಉದ್ಘಾಟಿ ಸಿದರು.ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು, ಎಸ್ ಡಿ ಎಂ ಸಿ ಸಮಿತಿಯವರು ಹಾಗೂ ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.










