ಜೂ. 28ರಂದು ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ಪಂಜ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ವೆಂಕಪ್ಪ ಗೌಡ ಕೇನಾಜೆಯವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ 2024-25 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣಗೊಂಡು ಕಾಲೇಜಿಗೆ ಕೀರ್ತಿ ತಂದ ಒಟ್ಟು 50 ವಿದ್ಯಾರ್ಥಿಗಳನ್ನು, ಸ್ಮರಣಿಕೆ ಹಾಗೂ ಪುಸ್ತಕ ನೀಡಿ ಗೌರವಿಸಲಾಯಿತು. ಸಾಧನೆಗೈದ ವಿದ್ಯಾರ್ಥಿಗಳ ಪರವಾಗಿ ಕು. ಗೌತಮಿ, ಕು. ಅಬಿದಾ, ಕು. ಪ್ರಿಯದರ್ಶಿನಿ ಹಾಗೂ ಕು.ಚೈತ್ರಾ ಅನಿಸಿಕೆ ವ್ಯಕ್ತ ಪಡಿಸಿದರು.





ವಿದ್ಯಾರ್ಥಿ ನಾಯಕ ಪ್ರಜ್ವಲ್, ಉಪನಾಯಕ ಅಕ್ಷತ್ ಹಾಗೂ ಮಂತ್ರಿಮಂಡಲದ ಇತರ ಎಲ್ಲಾ ಸದಸ್ಯರಿಗೆ ಪ್ರಾಂಶುಪಾಲರಾದ ಮೋಹನ ಗೌಡ ಬೊಮ್ಮೆಟ್ಟಿ ಪ್ರತಿಜ್ಞಾವಿಧಿ ಬೋಧಿಸಿದರು.





ಹಿರಿಯ ಉಪನ್ಯಾಸಕ ಕೃಷ್ಣ ಪಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಮಾಜಶಾಸ್ತ್ರ ಉಪನ್ಯಾಸಕರಾದ ಶಿವರಾಮನಾಯ್ಕಕೆ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಹಿರಿಯ ಉಪನ್ಯಾಸಕಿ ಶ್ರೀಮತಿ ಯಶೋದ ಪಿ. ವಂದಿಸಿದರು. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಕು.ವೈಷ್ಣವಿಮತ್ತು ಕು.ರಕ್ಷಾ ಪ್ರಾರ್ಥಿಸಿದರು. ರಸಾಯನಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸ್ಮಿತಾ ಭಾಸ್ಕರ್ ಕಾರ್ಯಕ್ರಮ ನಿರೂಪಿಸಿದರು.

ಉಪನ್ಯಾಸಕಿಯರಾದ ಶ್ರೀಮತಿ ಮೀರಾಕೆ. ಸಾಧಕ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ಶ್ರೀಮತಿ ಸತ್ಯವತಿ, ಮತ್ತು ಶ್ರೀಮತಿ ಹವ್ಯಶ್ರೀ ಸಹಕರಿಸಿದರು.










