ಬೈಕ್ – ಬಸ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವೈದ್ಯ ಡಾ. ಶಮಂತ್ ಮೃತ್ಯು

0

ಕಳೆದ ಎರಡು ವಾರಗಳ ಹಿಂದೆ ಸೋಣಂಗೇರಿ ಸಮೀಪ ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಕಲ್ಲುಗುಂಡಿಯ ಡಾ. ಶಮಂತ್ ರವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಕಾಲಿಗೆ ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದು, ಕಾಲು ತೀವ್ರವಾಗಿ ಜಖಂಗೊಂಡಿದ್ದ ಹಿನ್ನೆಲೆಯಲ್ಲಿ ಮೂರು ಬಾರಿ ಶಸ್ತ್ರಚಿಕಿತ್ಸೆ ನಡೆದಿತ್ತೆನ್ನಲಾಗಿದೆ. ಡಾ. ಶಮಂತ್ ಅವರು ದುಗ್ಗಲಡ್ಕ ನಮ್ಮ ಕ್ಲಿನಿಕ್ ನಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದು, ಆಸ್ಪತ್ರೆಯಿಂದ ಮನೆಗೆ ಹೋಗುವ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿತ್ತು.