ದುಗ್ಗಲಡ್ಕ ಶ್ರೀ ದುಗ್ಗಲಾಯ ದೈವಸ್ಥಾನದಲ್ಲಿ ಅಷ್ಟರೂಢ ಶಿವಪಾರ್ವತಿ ಹೋಮ- ಮೃತ್ಯುಂಜಯ ಹೋಮ- ಸುದರ್ಶನ ಹೋಮ

0

ದುಗ್ಗಲಡ್ಕದ ಶ್ರೀ ದುಗ್ಗಲಾಯ ದೈವಸ್ಥಾನದಲ್ಲಿ ಕ್ಷೇತ್ರದ ಅಭಿವೃದ್ಧಿ ಮತ್ತು ಊರ ಜನರ ಕ್ಷೇಮಾಭಿವೃದ್ಧಿಗಾಗಿ ವಿಶೇಷ ಪೂಜೆ ಮತ್ತು ಹೋಮಗಳು ಜುಲೈ 3 ರಂದು ನಡೆಯಲಿದೆ.

ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಶ್ನಾ ಚಿಂತನೆಯಂತೆ ದೋಷ,ಬಾಧೆಗಳ ಪರಿಹಾರಕ್ಕಾಗಿ ಜು.3 ರಂದು ಬೆಳಿಗ್ಗೆಯಿಂದ ಕ್ಷೇತ್ರದಲ್ಲಿ ಅಷ್ಟರೂಢ ಶಿವಪಾರ್ವತಿ ಹೋಮ, ಮೃತ್ಯುಂಜಯ ಹೋಮ ಹಾಗೂ ಸುದರ್ಶನ ಹೋಮ ನಡೆಯಿತು.


ಧಾರ್ಮಿಕ ಕಾರ್ಯಕ್ರಮಗಳನ್ನು ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿ ಮತ್ತು ಬಳಗದವರು ನಿರ್ವಹಿಸಿದರು.


ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರರಾದ ರಾಘವೇಂದ್ರ ಭಟ್ ಕಲ್ದಂಬೆ, ಆಡಳಿತ ಸಮಿತಿ ಅಧ್ಯಕ್ಷರಾದ ಕುಶಾಲಪ್ಪ ಗೌಡ ಕಜೆ,ಮಾಜಿ ಅಧ್ಯಕ್ಷರಾದ ದಯಾನಂದ ಸಾಲಿಯಾನ್ ಮೂಡೆಕಲ್ಲು, ಕಾರ್ಯದರ್ಶಿ ಶೇಖರ ಕುದ್ಪಾಜೆ, ಮಹಿಳಾ ಸೇವಾ ಸಮಿತಿ ಅಧ್ಯಕ್ಷೆ ಶ್ರೀಮತಿ ಪ್ರಭಾವತಿ ರೈ, ಯುವ ಸೇವಾ ಸಮಿತಿ ಅಧ್ಯಕ್ಷ ನಾರಾಯಣ ನಾಯ್ಕ್, ನಗರ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಶಿಕಲಾ ಎ.ನೀರಬಿದಿರೆ, ಸದಸ್ಯ ಬಾಲಕೃಷ್ಣ ರೈ ದುಗ್ಗಲಡ್ಕ, ಸಮಿತಿಗಳ ಸದಸ್ಯರು, ಊರ ಭಕ್ತಾದಿಗಳು ಉಪಸ್ಥಿತರಿದ್ದರು.