ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ತಲೆ ಮರೆಸಿಕೊಂಡಿದ್ದ ಕೊಡಗಿನ ಅಬ್ದುಲ್ ರೆಹಮಾನ್ ಬಂಧನವಾಗಿದೆ ಎಂದು ತಿಳಿದುಬಂದಿದೆ.
ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಈತನನ್ನು ಕೇರಳದಲ್ಲಿ ಎನ್ ಐ ಎ ಬಂಧಿಸಿದೆ ಎಂದು ತಿಳಿದುಬಂದಿದೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪದಲ್ಲಿ ಕೊಡಗಿನ ಸೋಮವಾರಪೇಟೆ ತಾಲೂಕಿನ ಕಲ್ಕಂದೂರಿನವನಾದ ಅಬ್ದುಲ್ ರೆಹಮಾನ್ ಮೇಲೆ ಪ್ರಕರಣ ದಾಖಲಾಗಿತ್ತು.
ಆರೋಪಿಯನ್ನು ಎನ್ ಐ ಎ ಅಧಿಕಾರಿಗಳು ಕೇರಳದ ಕಣ್ಣೂರು ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ಈತ ವಿದೇಶಕ್ಕೆ ತೆರಳಿ ಕತಾರ್ ನ ದೋಹಾದಲ್ಲಿ ತಲೆಮರೆಸಿಕೊಂಡಿದ್ದ .
ಅಬ್ದುಲ್ ರೆಹಮಾನ್ ಬಗ್ಗೆ ಮಾಹಿತಿ ನೀಡಿದವರಿಗೆ ನಗದು ಬಹುಮಾನವನ್ನು ಕೂಡ ರಾಜ್ಯ ಗೃಹ ಇಲಾಖೆ ಘೋಷಿಸಿತ್ತು.
ಇದೀಗ ರೆಹಮಾನನ್ನು ವಶಕ್ಕೆ ಪಡೆದಿರುವ ಎನ್ ಐ ಎ ಅಧಿಕಾರಿಗಳು ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.