
ಸುಳ್ಯದ ಸೈಂಟ್ ಜೋಸೆಫ್ ಪ್ರೌಢ ಶಾಲೆಯ ಪೋಷಕರ ಪ್ರಥಮ ಸಭೆಯು ಜು. 4 ರಂದು ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೊತೆ ಕಾರ್ಯದರ್ಶಿ ವಂದನೀಯ ಧರ್ಮ ಗುರು ಆಲ್ವಿನ್ ಎಡ್ವರ್ಡ್ ಡಿಕುನ್ನ ವಹಿಸಿದ್ದರು.

ವೇದಿಕೆಯಲ್ಲಿ ಪ್ರೌಢಶಾಲಾ ಪೋಷಕ ಸಮಿತಿಯ ಉಪಾಧ್ಯಕ್ಷ ಹೇಮನಾಥ ಕೊಡಿಯಾಲ್ ಬೈಲು, ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಮೇರಿಸ್ಟೆಲ್ಲಾ, ಪ್ರೌಢಶಾಲಾ ಶಿಕ್ಷಕ ಕಾರ್ಯದರ್ಶಿ ಶ್ರೀಮತಿ ಉಷಾದೇವಿಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕ ಕಾರ್ಯದರ್ಶಿ ಶ್ರೀಮತಿ ಉಷಾದೇವಿ ವರದಿ ವಾಚಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಮೇರಿ ಸ್ಟೆಲ್ಲಾ ಸಲಹೆ ಸೂಚನೆಗಳನ್ನು ನೀಡಿದರು.








ನಂತರ ನೂತನ ಪೋಷಕ ಸಮಿತಿಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಶ್ರೀಮತಿ ರೀಟಾಲತ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ಅನಿತಾ ಮಸ್ಕರೇನಸ್ ವಂದಿಸಿದರು. ಸಹಶಿಕ್ಷಕಿಯರಾದ ಶ್ರೀಮತಿ ದೇವಿಲತಾ ಕೆ.ಮತ್ತು ಶ್ರೀಮತಿ ಜ್ಯೋತಿ ಜೆ. ರೈ. ಸಭಾ ಕಾರ್ಯಕ್ರಮ ನಿರೂಪಿಸಿದರು. ಇತರೆ ಶಿಕ್ಷಕ- ಶಿಕ್ಷಕೇತರ ಸಿಬ್ಬಂದಿಗಳು ಸಹಕರಿಸಿದರು.










